ಟಿಕೇಟು

ಮತ್ತದೇ ತಪ್ಪು
ರೈಲು ಹೋದ ಮೇಲೆ ಬಂದ ಟಿಕೇಟು
ಕಷ್ಟ ಈ ರೈಲು
ಹತ್ತುವುದು ಇಳಿಯುವುದು
ದಾರಿಯಲ್ಲಿ ಎದುರಾದವ
ರಿಗೆಲ್ಲ ಸಲಾಮು
ತಿಳಿಯದೇ ಯಾರ ಮರ್ಮ
ಯೋಚಿಸುತ್ತ ನಿಂತೆ ನಿಂತ
ಲ್ಲೇ ನೀರಾಗಿ ಹರಿದೆ
ಹತ್ತುವ ಯೋಗವಿಲ್ಲ ಬಿಡಿ
ಬರಬಹುದು ಇನ್ನೊಂದು ರೈಲು
ತೆಗೆದರಾಯಿತು ಇನ್ನೊಂದು ಟಿಕೇಟು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧನಿಕನ ತಿಜೋರಿ ಕೀ ಅವನ ಸಂಪತ್ತನ್ನು
Next post ಮತ್ಸರ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…