ಕ್ಷಮಿಸು, ಕೇಳದೆ ನಿನ್ನ ಅನುಮತಿಯ

ಕ್ಷಮಿಸು, ಕೇಳದೆ ನಿನ್ನ ಅನುಮತಿಯ
ಸೂರೆಗೊಂಡೆನು ನಿನ್ನ ಹೃದಯ
ಕರುಣೆಯಿದ್ದರೆ ಅನುಮೋದಿಸು ಇದನು
ಪ್ರೀತಿ ಬೆಲೆಯ ಅರಿತ ನೀನು/ಪ//

ನಿನಗೇ ಗೊತ್ತು ಪ್ರೀತಿಯೇ ಎಲ್ಲ
ಅದರ ಮುಂದೆ ಯಾವುದೂ ಇಲ್ಲ
ಈ ತಿಳುವಳಿಕೆಗೆ ನೀ ಪ್ರಾಧ್ಯಾಪಕಿ
ಸದ್ಯಕ್ಕದರ ನಿರೂಪಣೆ ಬಾಕಿ!

ನಿನ್ನಿಂದ ಬಾ ಪ್ರೇಮಾನುಭಾವಿ
ಆದರೆ ದ್ವೈತದ ಪ್ರೇಮೋಪಜೀವಿ
ಇಂತಹ ಜೀವಿಗೆ ಯಾಕೀ ದೂರ? ನಿನ-
ಗಿಷ್ಟವೆ ಹೇಳೀ ಹೃದಯದ ಭಾರ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲಿದು ಬಂದವಳು
Next post ಇರಲಿ

ಸಣ್ಣ ಕತೆ

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…