ಗಾನ ಗಂಟೆ

ಬನ್ನಿ ಹೂಗಳೆ ಹಣ್ಣು ಕಾಯ್ಗಳೆ
ಅಕ್ಕ ತಮ್ಮರೆ ಬನ್ನಿರಿ
ಶಿವನ ತೋಟದ ಪುಟ್ಟ ಗಿಳಿಗಳೆ
ಗಾನ ಗ೦ಟೆಯ ಕೇಳಿರಿ

ನಮ್ಮ ನವಿಲಿನ ಚಂದ ನರ್ತನ
ಜ್ಞಾನ ನರ್ತನವಾಗಿದೆ
ನಮ್ಮ ಸುಂದರ ಜ್ಞಾನ ಗಾಯನ
ಶಿವನ ಕಣ್ಣನು ತೆರೆದಿದೆ

ನಾವೆ ನಿಬ್ಬಣ ನಾವೆ ಔತಣ
ಆತ್ಮ ಚಾರಣ ಮುನಿಗಳು
ಮುಗಿಲ ಅಂಗಳ ಹಕ್ಕಿ ತೋರಣ
ಹಾರುತಿರುವಾ ಋಷಿಗಳು

ನಾವು ಸುಂದರ ಆತ್ಮ ವಧುಗಳು
ನಮ್ಮ ಪ್ರಿಯತಮ ಬಂದನು
ದೂರ ದೂರದ ಮಹಾಮೌನದ
ಶಾಂತಿ ಮಂಚಕೆ ತಂದನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟಚ್ ಇರಲಿ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೨

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…