ಇದೇ ಭುವನಾ ಶಿವನ ಕವನಾ

ಇದೇ ಭುವನಾ ಶಿವನ ಕವನಾ
ನಾವು ದೇಗುಲ ವಾಗುವಾ
ನುಡಿವ ದೇಗುಲ ನಡೆವ ದೇಗುಲ
ವಿಶ್ವ ಜಂಗಮವಾಗುವಾ

ಶಿವನ ಒಡ್ಡೋಲಗದಿ ನಾವೆ
ನಂದಿ ಭೃಂಗಿ ಗಣಗಳು
ನಾವೆ ಪಾರ್ವತಿ ಗಂಗೆ ಗೌರಿಯು
ಬನ್ನಿ ಕುಣಿಯುವ ಗೆಳೆಯರು

ಮಣ್ಣ ಭೂಮಿಯ ಮಂತ್ರ ಮಾಡುವ
ಚಂದ ಸ್ವರ್ಗವ ಕಟ್ಟುವಾ
ಕಲ್ಲು ನೆಲ ಕೈಲಾಸ ಗೈಯುವಾ
ಇಲ್ಲಿ ಗಣಪನ ಕರೆಯುವಾ

ಎಲ್ಲಿ ಶೈಲಜೆ ಇರುವಳಲ್ಲಿಯೆ
ಪ್ರೇಮಶಂಕರ ಕುಣಿವನು
ಎಲ್ಲಿ ಆತ್ಮರು ಕರೆವರಲ್ಲಿಗೆ
ಜ್ಞಾನ ಗಂಗೆಯ ತರುವನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚರಿತ್ರೆ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೬

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…