ಯಾಜ್ಞವಲ್ಕ್ಯನೂ ಮೃತ್ರೇಯಿಯೂ

ಯಾಜ್ಞವಲ್ಕ್ಯ ಹೇಳಿದ, ಮೈತ್ರೇಯಿಯ ಕರೆದು :
“ಕಾತ್ಯಾಯಿನಿಯೆಂದರೆ ಕಣ್ಣು ಮೂಗು ಮೊಲೆ
ತಲೆಯೆಂದರೆ ನಿನ್ನದೆ ! ಆದ್ದರಿಂದ
ಆತ್ಮವಿದ್ಯೆ ನಿನಗೇ
ಕಲಿಸುವೆ ನಾನು ಪ್ರತ್ಯಕ್ಷ.”

ನಗಾರಿಯೊಂದ ತರಿಸಿದ.
ಅದಕ್ಕೆ ಸರೀ ಬಾರಿಸಿದ.
ಅದರ ಸದ್ದು ಸುತ್ತಲೂ
ಗಿರಿಕಂದರ ವ್ಯಾಪಿಸಿತು.
ಹಕ್ಕಿಗಳೂ ಹಾರಿದುವು
ಕೋತಿಗಳೂ ಓಡಿದವು.
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:
“ಎಲ್ಲಿಂದ ಹೊರಟಿತು, ಎಲ್ಲಿಗೆ ಹೋಯ್ತು ?
ಹಿಡಿವಂತಿಲ್ಲ ಕೈಯಲ್ಲಿ
ಕರೆವಂತಿಲ್ಲ ವಾಪಸು
ಆದರೂ-
ನಗಾರಿ ನಮ್ಮ ಕೈಯೊಳಗೆ !”
**

ಬೆಂಕಿಯೊಂದ ಮಾಡಿದ-ಅದಕ್ಕೆ
ಹಸೀ ಉರುವಲು ಹಾಕಿದ.
ಹೊಗೆ!

ಕಪ್ಪು, ಕಂದು, ನೀಲಿ
ಎಲ್ಲಾ ಕಡೆ ಹೊರಳಿ
“ನೋಡಿದಿಯಾ!” ಎಂದ ಯಾಜ್ಞವಲ್ಕ್ಯ:

“ಹೇಗೆ ಹಸೀ ಸೌದೆಯಿಂದ
ಹುಟ್ಟುತ್ತದೆ ಹೊಗೆ-ಹಾಗೆ
ಆತ್ಮದಿಂದ ಎಲ್ಲವೂ !”
**

ದೋಣಿಯೊಂದ ತರಿಸಿದ-ತಳಕ್ಕೆ
ಎರಡು ತೂತು ಕೊರೆಸಿದ.
ನೀರು ಒಳಕ್ಕೆ ಧಾವಿಸಿತು
ಮೊಗೆದಷ್ಟೂ ಮುಗಿಯದೆ.
ಈಜಿ ದಡ ಸೇರಿದರು.
“ನೋಡಿದಿಯಾ !” ಎಂದ ಯಾಜ್ಞವಲ್ಕ್ಯ
“ದೇಹವೆಂದವರೆ ಒಡಕು ದೋಣಿ
ನಂಬಿದವಗೆ ಗತಿಯಿಲ್ಲ–
ಆತ್ಮಜ್ಞಾನವೆಂದರೆ
ಅದು ಈಜಿನ ಹಾಗೆ !”
**

ಆರಗಿಣಿಯೊಂದ ತರಿಸಿದ
ಪಂಚವರ್ಣದ ಗಿಣಿ, ಸಣ್ಣ ಕಣ್ಣಿನ ಗಿಣಿ
ನೋಡಿದರೆ ಇನ್ನೂ
ನೋಡವೇಕೆಂಬ ಗಿಣಿ
ಹಾಡುವುದಕ್ಕೆ ಕಲಿಯಿತು
ವೇದಗಳ ಪಠಿಸಿತು
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಹಾಡುತ್ತದೆ, ನುಡಿಯುತ್ತದೆ
ಮಾತ್ರ-
ಯಾಕೆ ಏನು ತಿಳಿಯದು.
ಆತ್ಮಜ್ಞಾನ ಇರದ ಹೊರತು
ಏನು ಹೇಳಿ ಏನು !”
**

ಹೇಂಟೆಯೊಂದ ತರಿಸಿದ
ಪ್ರತಿದಿನವೂ ತಿನಿಸಿದ.
ಬೆಳಗಿಂಜಾಮ ಕೂಗುತಿತ್ತು
ಎಲ್ಲರ ಎಬ್ಬಿಸುತಿತ್ತು
ಮಾತ್ರ-ಎಷ್ಟೇ ದಿನ ಕಳೆದರೂ
ಇಡಲಿಲ್ಲ ತತ್ತಿ
“ನೋಡಿದೆಯಾ!” ಎಂದ ಯಾಜ್ಞವಲ್ಕ್ಯ:
“ಆತ್ಮಕ್ಕೆ ಬೇಕು ಪರಮಾತ್ಮ
ಇಲ್ಲದೇ-
ದಕ್ಕಲಾರದು ಬ್ರಹ್ಮಾಂಡ !
**

ಮುಗಿಯಿತೇ ಎಂದಳು ಮೈತ್ರೇಯಿ
ಹೂಂ ಎಂದ ಯಾಜ್ಞವಲ್ಕ್ಯ.
ಒಂದು ಮಾತ್ರ ಮರೆತಿರೆಂದು
ಸೀರೆ ರವಿಕೆ ಬಿಚ್ಚಿದಳು
ಲಂಗ ಒದ್ದು ಜಾಡಿಸಿದಳು.
“ನೋಡಿದಿರಾ!” ಎಂದಳು ಮೈತ್ರೇಯಿ :
“ಸೀರೆಯೆಂದರಹಂಕಾರ
ರವಿಕೆ ತಪ್ಪು ಗ್ರಹಿಕೆ
ಬಾಡಿಯೆಂದರೆ ಕಿಲಾಡಿ
ಲಂಗ ಆಶಾಭಂಗ-ಇನ್ನು
ನೂರಕ್ಕೆ ನೂರು ಸಾಚಾ
ಆಗಬೇಕೆಂದರೆ ಇದೋ !” ಎಂದು
ಕಿತ್ಕೆಸೆದಳು ಕಾಚ !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿರಹ
Next post ಎಲ್ಲಿ ಹುಡುಕಲಿ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…