ಮಗಳು

ನಾ… ಗುರುತಿಸಬಲ್ಲೆ
ಅವಳು, ಅವಳೇ ನನ್ನ ಮಗಳು

ಮುದ್ದಾದ ಜಿಂಕೆ, ನವಿಲು
ಸುರಗಿ, ರಂಜ, ಜಾಜಿ
ದೇವ ಕಣಗಿಲೆ ಹೂವಿನಂತವಳು

ಹಂಚಿಕೊಂಡೆವು ಪ್ರೀತಿಯ ಅಗುಳು
ನೋವಿನಲ್ಲೊಂದು ಪಾಲು
ನೀಡಿ ಬೇಡಿ ಪಡೆದವಳು

ಬುಟ್ಟಿಯ ತುಂಬ
ನಕ್ಷತ್ರಗಳನ್ನು ತುಂಬಿಕೊಟ್ಟೆ
ಜತೆಗಿರಲಿ ಎಂದು
ಸೂರ್ಯ ಚಂದ್ರರನೂ ಇಟ್ಟೆ

ನಾ ಹಾರಿಬಿಟ್ಟ ಪ್ರಾಣ ಪಕ್ಷಿಯನು
ತನ್ನೆದೆ ಗೂಡಿನಲಿ ಬಚ್ಚಿಟ್ಟು
ಜತನದಿಂದ ಸಾಕುವಳು
ಜೀವ ತುಂಬುವಳು ಇನ್ನವಳು
ನಾನೇ ಅವಳ ಮಗಳು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆವೇಶ
Next post ಇದು

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…