ಭಯೋತ್ಪಾದಕ

ತಂದೆಗೆ ತಕ್ಕ ಮಗನಾಗಿದ್ದ
ಪ್ರಿಯಳಿಗೆ ಒಳ್ಳೆಯ ಗೆಳೆಯನಾಗಿದ್ದ
ತಂಗಿಗೆ ಪ್ರೀತಿಯ ಅಣ್ಣನಾಗಿದ್ದ….

ಹೂವುಗಳನು ಬೆಳೆಯುತ್ತಿದ್ದ
ಹಣ್ಣುಗಳ ಮಾರುತ್ತಿದ್ದ
ಇರುವೆಯಂತೆ ದುಡಿಯುತ್ತಿದ್ದ….

ದೇವರಿಗೆ ಹೋಗುತ್ತಿದ್ದ
ದೀನನಾಗಿ ಬೇಡುತ್ತಿದ್ದ
ದಿವ್ಯವಾಗಿ ಹಾಡುತ್ತಿದ್ದ….

ಹೇಗಿದ್ದ? ಹೇಗಾದ?
ಸಾಕಾದ? ಯಾಕಾದ?

ಬೆನ್ನಿಗೆ ಬಾಂಬು ಕಟ್ಟಿಕೊಂಡ
ಕೊರಳಲಿ ವಿಷ ಇಟ್ಟುಕೊಂಡ
ನಿರ್‍ದಯಿ, ಹಂತಕ, ಭಯೋತ್ಪಾದಕ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾತ್ರಿಯು ದಿವಸವಾದರೆ……
Next post ಕೈ ಜೋಡಿಸಿ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…