ಈಚಲ ಮರದಡಿ

ಈಚಲ ಮರದಡಿ ಮಜ್ಜಿಗೆ ಕುಡಿದರೆ
ಕಳ್ಳಾಯಿತೋ ದೇವ
ಸುಳ್ಳರೆದುರಿಗೆ ಸತ್ಯವ ನುಡಿದರೆ
ಅಸತ್ಯವಾಯಿತೋ ದೇವ

ತಾವರೆ ಕೀಳಲು ನೀರಿಗೆ ಹೋದರೆ
ಕೆಸರಲಿ ಬಿದ್ದೆನೋ ದೇವ
ಕೇದಿಗೆ ಕೊಯ್ಯಲು ಪೊದರಿಗೆ ಹೋದರೆ
ಮುಳ್ಳು ಹೊದ್ದೆನೋ ದೇವ

ಕನ್ನಡಿಯಲಿ ಮುಖ ನೋಡುವೆನೆಂದರೆ
ಟಳ್ಳನೆ ಒಡೆಯಿತೋ ದೇವ
ನನ್ನ ನಾ ತಿಳಿಯುವೆನೆಂದರೆ
ನಾ ಸೊನ್ನೆಯಾದೆನೋ ದೇವ
ಸಂಗಮ ದೇವ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿದ್ದೆಯ ಕತೆ
Next post ಜಡ ವಸ್ತುವೆ?

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…