ಹೊಸ ಹೊತ್ತು

ಸಿಡಿದು ಹೋಗಲಿ ತಾರೆ
ನೆಗೆದು ಬೀಳಲಿ ಚಂದ್ರ
ಹೂತು ಹೋಗಲಿ ಹಗಲು
ಬಂದೀತು ನಮಗೆ ಹೊಸ ಹೊತ್ತು.
ಕಗ್ಗತ್ತಲ ಕೋಟೆಯಲ್ಲಿ
ಹೊಸ ಆಸೆಯ ಹುಟ್ಟು.

ಕತ್ತು ಮುರಿಯುವ
ಕತ್ತಲಿಗೆ ಇಟ್ಟೇವು
ಭಗ್ಗೆನ್ನುವ ಬೆಂಕಿ
ಬೆಂದು ಹೋಗಲಿ
ಬೂದಿಯಾಗಲಿ
ಸೆರೆ ಕುಡಿಸಿದ
ಸಾಧನೆ ಸವಲತ್ತಿನ ಅಂಕಿ.

ಭ್ರಮೆ ಬೂದಿಯಲಿ
ಚಿಗುರೊಡೆಯಲಿ
ಸರಿ ವಾಸ್ತವದುಸಿರು-
ಯುಗ ಯುಗದಲಿ
ಮುಗಿಲೆತ್ತರ ತಲೆಯೆತ್ತುವ
ಭ್ರಮೆ ಭೂತಕೆ ಸಿಡಿಲು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಷ್ಟೊಂದು ಅಬ್ಬರ, ಎಷ್ಟೊಂದು ನೊರೆ ತೆರೆ
Next post ಪ್ರೀತಿಯಿಂದ ಕೊಲ್ಲು ನೀ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…