ಅಳುವ ಮಗು

ರಸ್ತೆ ಮಧ್ಯದಲಿ
ರಾಶಿ ಹೆಣಗಳು
ರಕ್ತ ರಾಜ್ಯದಲಿ
ಸತ್ತ ಜನಗಳು
ಅಳುತ್ತ ಕೂತಿದೆ
ಮಗುವೊಂದು
ಸಂಕಟಶಾಲೆಯ
ಸುಳಿಯೊಂದು.

ಮತ ಯಾಚಿಸುವ
ಮತಧರ್‍ಮಗಳು
ಲೆಕ್ಕಾಚಾರದ ಬೆತ್ತಲೆರೂಪ
ಬರೆಯುವ ಚೆಕ್ಕುಗಳು
ಅಳುತ್ತ ಕೂತಿದೆ
ಬೆಳಕಿನ ರೂಪ
ನೆತ್ತರ ಬಳ್ಳಿಯ
ನಡುವಿನಲಿ
ಲಾಠಿ ಬೂಟುಗಳ
ಅಡವಿಯಲಿ.

ಸುಂದರ ಮುಖದಲಿ
ಬೆಳಕು ಬೆಂದಿದೆ
ಬೂದಿ ಭಾವದಲಿ
ಗಾದಿ ಗದರಿಗೆ
ಹೆತ್ತ ತಾಯಿಗೆ
ಸತ್ತ ಸಹಿಯನು
ಹಾಕುವ ಅಕ್ಷರ-
ಅಳುವಿನಲಿ
ಸಾವಿರ ಸಾವಿನ
ಸೆಳವಿನಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್ನಾಟಕದ ಡಾಬಾ ಸಂಸ್ಕೃತಿ
Next post ಬನ್ನಿ ಯಾತ್ರಿಕರೇ ನೀವೆಲ್ಲಾ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…