ಯೋಗಮುದ್ರಿ ಬಲಿದವನೆಂಬೋ
ಆಗ ಮೂಲದಿ ನಿನಗೆ
ಭೋಗ ವಿಷಯ ಲಂಪಟಂಗಳನರಿಯದೆ
ಲಾಗವನರಿಯದೆ ಹೀಗಾಗುವರೆ ||೧||
ವಿಷಯದೊಳಗೆ ಮನಸನಿಟ್ಟು
ಹುಸಿಯ ಬೀಳುವರೇನೋ ಮರುಳೆ
ಅಸಮ ತೇಜವನು ತನ್ನೊಳು ಕಾಣುತ
ಶಶಿಕಿರಣದ ರಸವನರಿಯದೆ ||೨||
ಬಗಿದುನೋಡಿ ಬ್ರಹ್ಮಜ್ಞಾನ
ಸಿಗದೆ ಮಿಡುಕುವರೇನೋ ಮರುಳೆ
ಜಿಗಿಯಲಜಾಂಡಕೆ ಝಗ ಝಗಿಸುವೆ ನೀ
ಚಿಗಹಳ್ಳಿಗೆ ಶಿಶುನಾಳಧೀಶ ನೀವು ||೩||
****