ಹೃದಯದಲುದಿಸಿದ ಕವಿತೆ

“ನನ್ನ ಹೃದಯದಲುದಿಸಿದ ಕವಿತೆ
ನಿನ್ನ ನೆನಪಲೆ ಹಾಡಿದೆ ಚರಿತೆ”

ಗರಿಗೆದರುತ ಕುಣಿದಾ ನವಿಲು
ಮಳೆ ಹನಿಸಿತು ಕರಗಿಸಿ ಮುಗಿಲು
ಗಿರಿ ಕಾನನ ತಬ್ಬಿದ ಹಸಿರು
ನಮ್ಮ ಪ್ರೀತಿಗೆ ತಂದಿತು ಉಸಿರು
ಎಲ್ಲಾ ನದಿ ಝರಿ ಹೊನಲು
ನಮ್ಮ ಪ್ರೀತಿಗೆ ಹಾಸಿತು ಮಡಿಲು

ಅಲ್ಲಿ ಗೋಡೆಗಳಿಗೆ ನೆಲೆಯಿಲ್ಲ
ಜನ ಭಾಷೆಯ ಋಣ ಬೇಕಿಲ್ಲ
ಅಲ್ಲಿ ಬೆಳಕೆಂಬುದು ಬರಿ ಅಲ್ಲ
ಅದು ಮನ-ಮೈ ಚೇತನ ಎಲ್ಲ
ಅದರೊಳು ಮೂಡಿದ ಕವಿತೆ
ನಿನ್ನ ನೆನಪಲೆ ಹಾಡಿದೆ ಚರಿತೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಸ್ಮಯ
Next post ಅನುಭವಸ್ಥರು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…