ತೂಗುವೆ ತೊಟ್ಟಿಲ

ತೂಗುವ ತೊಟ್ಟಿಲ ಜೋಗುಳ ಹಾಡಿ,
ಕೂಗದೆ ಮಲಗೆನ್ನ ಮುದ್ದಿನ ಮೋಡಿ, ಜೋ ಜೋ

ತುಂಬಿ ಪವಡಿಸಿತು ಎಸಳ ಹೂಗಳಲಿ,
ಗೊಂಬೆ! ನಿನ್ನಯ ಕಣ್ಣಿನೆವೆ ಸೆರೆಗೊಳಲಿ,
ರೆಂಬೆ ಚಿಗುರೊಳಡಗಿತು ಪಿಕದುಲಿಯು,
ಸೋಂಬನಾಗಲಿ ನಿನ್ನ ತುಟಿ ಚಿಲಿಪಿಲಿಯು.

ಜಲದಮೇಲ್ ಮಲಗುವ ಮರಿಹಂಸದಂತೆ.
ಎಲೆಯೊಳಗಿಹ ಮಲ್ಲಿಗೆಯ ಮೊಗ್ಗಿನಂತೆ,
ಚೆಲುತೊಟ್ಟಿಲಲಿ ಮಲಗು ಅರಗಿಳಿಯೆ,
ತಲೆಗಿಂಬಿಗೀಶನ ಕೈ ನಿನ್ನ ಬಳಿಯೆ.
*****
(ಕವಿಶಿಷ್ಯ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾವಾಗಲೂ ನಿಯಮ ಮೀರಿದರೆ ಬಚಾವಾದೀತೇ?
Next post ಶರಣಾಗತಿಯ ಶತಮಾನ

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…