ತಂಗಿಗೆ

ನಿನ್ನ ಕಣ್ಣ ಹನಿ ನನ್ನ ಮನಕೊರೆದು
ತತ್ತರಿಸಿ ಬಿಡುವುದಮ್ಮ
ಬೇಡ ಹಾಕದಿರು, ತಡೆದು ಹಿಡಿತಾಯಿ
ಕಣ್ಣೀರ ಮುತ್ತನಮ್ಮ

ಒಂದೆ ಹೊಟ್ಟೆಯಲಿ ಹುಟ್ಟ ಬಹುದಿತ್ತು
ಎಂತೊ ತಪ್ಪಿತಕ್ಕ
ಆದರೇನು ನಾವಣ್ಣ ತಂಗಿಯರು
ಆಗಿ ಇರುವದಕ್ಕ

ಹುಟ್ಟಿನಲ್ಲೇನು ಇಹುದು ತಂಗಿ ಕೇಳ್
ವಾತ್ಸಲ್ಯದಲ್ಲಿ ತುಂಬ
ಮಧುರ ಬಾಂಧವ್ಯವಿರಲು ಕೊರಗೇಕೆ
ಎದೆಯಲ್ಲ ಜೇನಿಗಿಂಬ

ಕೊಳ್ಳು ಕುಸಿರೆಳ್ಳು ತಂಗಿ ಬಾಯಲ್ಲಿ
ಬಡ ಅಣ್ಣ ಕೊಟ್ಟನಿದನು
ಕಡಲಿನಲ್ಲಿ ಉಪ್ಪಿಲ್ಲದೇನಿನ್ನು
ತೊಡೆ ಕಣ್ಣ ನೀರನಿದನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೧
Next post ರಾವಣಾಂತರಂಗ – ೬

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…