ಯೋಗಿಯ ಕಂಡೆನು

ಯೋಗಿಯ ಕಂಡೆನು ಹುಚ್ಚೇಂದ್ರ
ಯೋಗಿಯ ಕಂಡೆನು ನಾನು ||ಪ||

ಭೋಗವಿಷಯವ ತ್ಯಾಗ ಮಾಡಿದ
ಆಗಮವ ತಿಳಿದಂಥ ಮಹಾಗುರು
ಲಾಗದಿ ಲಕ್ಷಣವ ಬಿಂದುವಿನೊಳಗೆ ತೋರಿದ ಈಗ ನೋಡಿದೆ ||೧||

ಸ್ಥೂಲದೇಹವ ತಾಳಿದ ಜನರ ಬಿಟ್ಟು
ಮೂಲ ಬ್ರಹ್ಮವ ಪೇಳಿದ
ಕಾಲ ಕರ್ಮವ ಗೆಲಿದು ತನ್ನೊಳು
ತಾಳಿ ಸದ್ಗುರು ಲಿಂಗ ಲೀಲೆಯ
ಮ್ಯಾಳದೊಲು ಮೆರೆವಂಥ ಪರಮಾನಂದ ಲೋಲ ನಿಷ್ಕಲಂಕ ||೨||

ಶಿಶುನಾಳಧೀಶನಿಂದ ಪಡೆದ ಉಪದೇಶ ಎನಗೆ ಛಂದ
ಉಸುರುವೆನು ಸಾಕ್ಷಾತನ ಕರುಣದಿ
ವಿಷಯ ಇದರೊಳೇನು ಇಲ್ಲವು
ರಸಿಕರಾದವರೆಲ್ಲ ಕೇಳ್ವದು
ಹೊಸ ಕವಿತಾ ಬೋಧ ಆನಂದದಿ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿಂತೆಯಾತಕೋ ಯೋಗಿಗೆ
Next post ಎಂತು ಮರಿಯಲವ್ವಾ ಇವನಾ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…