ಯಾಕೆ?

ಯಾಕೆ? ಎಂದೆ ಕೇಳ್ವರೆಲ್ಲ
ನೋವ ಮರೆಸರು
ಎಂತು ಎಂದು ಮೂಗಮೇಲೆ
ಬೆರಳನಿಡುವರು

ಗುರುವೆ ನೀನು ಮಾತ್ರ ಎನಿತು
ಕೇಳಲಿಲ್ಲವು
ಪಾಪಿ , ಎಂದು ನಿನ್ನ ದಿಟ್ಟ
ತೊರೆಯಲಿಲ್ಲವು

ನಿನ್ನ ಮಮತೆ ನನ್ನ ಮೂಕ-
ನನ್ನು ಮಾಡಿದೆ
ಮನದ ಮುದುಡನೆಲ್ಲತಿದ್ದಿ
ರೂಪ ನೀಡಿದೆ

ಬರಲಿ ಬಿಡಲಿನೋವು ಗೆಲವು
ಸೌಖ್ಯವೆಲ್ಲವು
ಚಿಂತೆಗೈಯೆ ನಿನ್ನ ದೇನೆ
ನನ್ನದೆಲ್ಲವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಾರ್ಥನೆ
Next post ರಾವಣಾಂತರಂಗ – ೯

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…