ತಾಳೆಯ ಮರದಡಿ


ತಾಳೆಯ ಮರದಡಿ
ತಪವನು ಗೈಯುವ
ತರುಣನೆ ಏಳಪ್ಪಾ!
ಕಣ್ಣು ಮುಚ್ಚಿ ನೀ
ಕಾಲವ ಕಳೆದರೆ
ಕಾಣುವಿಯೇನಪ್ಪಾ !


ತಾಳೆಯ ಮರವಿದು
ಬಾಳಲಿ ಬಹುದಿನ
ಕೇಳುವರಾರಪ್ಪಾ!
ಅರಳು ಮಲ್ಲಿಗೆಯು
ಅರೆಚಣವಿರುವದು
ಪರಿಮಳವೆಷ್ಟಪ್ಪಾ!


ಕಾಯಕವರಿಯದೆ
ಕಾಯವ ಬೆಳಿಸಿದಿ
ಹೇಯವು ತಿಳಿಯಪ್ಪಾ!
ಅರೆಚಣ ಬಾಳಿರು
ಪರರನು ಪ್ರೀತಿಸು
ಹರನೊಲಿಯುವನಪ್ಪಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರಾವಣ
Next post ವಚನ ವಿಚಾರ – ಸೋಂಕಿನ ಸೋಜಿಗ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…