ಹೊತ್ತುಗಳಿಯದಿರೆಲೋ ಮನವೆ

ಹೊತ್ತುಗಳಿಯದಿರೆಲೋ ಮನವೆ          ||ಪ||

ಗೊತ್ತು ಇಲ್ಲದೆ ನೀನು ಬರಿದೆ
ಚಿತ್ತಚಂಚಲನಾಗಿ ಚರಿಸ್ಯಾಡುತ್ತ
ನಾನಾ ವಿಷಯಗಳನು ಹೊತ್ತು ಶ್ರಮದೊಳಾಡಬೇಡ  ||ಅ.ಪ.||

ವ್ಯರ್ಥಒಂದಿನವಾಗಿ ತೊಲಗಿದಿ
ಅತ್ತು ಯಮನ ದೂತರೊಯ್ಯೆ
ಚಿತ್ರಗುಪ್ತರು ಲೆಖ್ಖ ತೋರಿಸಿ
ಲತ್ತಿಯನ್ನು ಹಾಕುತಿಹರೋ                       ||೧||

ನಾನಾ ಜನ್ಮಗಳನ್ನು ತಿರುಗಿ
ನಾನಾ ಯೋನಿಗಳಲ್ಲಿ ಜನಿಸಿ
ನಾನಾ ಕುಲದ ಹೆಸರು ಹೇಳಿ
ಹಾನಿ ಹೊಂದಿದರೇನು ಫಲವು                     ||೨||

ಪೊಡವಿಯಲ್ಲಿ ಸುಖ ಸೌಭಾಗ್ಯ
ಮಡುವಿನಲ್ಲಿ ಮುಳುಗಿ ತೇಲಿ
ಒಡಿಯ ಶಿಶುನಾಳೇಶನಡಿಯ
ಬಿಡದೆ ಧ್ಯಾನ ಮಾಡುತಿರ್ದು                     ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂತು ಮರಿಯಲವ್ವಾ ಇವನಾ
Next post ಮನಸೇ ಮನಸಿನ ಮನಸ ನಿಲ್ಲಿಸವುದು

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…