ಮುದ್ದಿನ ಗಿಳಿ

ಬಾರೆಲೆ ಗಿಳಿಯೇ
ಮುದ್ದಿನ ಮಣಿಯೇ
ಪಚ್ಚವ ಧರಿಸಿಹ
ರೇಶಿಮೆ ಮರಿಯೇ

ಹವಳದ ಕೊಕ್ಕಿನ
ಮುತ್ತಿನ ಕಣ್ಣಿನ
ಸುಂದರ ಪುಕ್ಕಿನ
ಚಂದದ ಗಿಳಿಯೇ। ಬಾ ಬಾ ಬಾ

ಮಾಟದ ಪಂಜರ
ಬಣ್ಣದ ಹಂದರ
ಅದರಲಿ ನಿನ್ನನು
ಇರಿಸುವ ಬಾ ಬಾ| ಬಾರೆಲೆ

ಬಗೆ ಬಗೆ ಹಣ್ಣನು
ನಾ ಕೊಡಿಸುವೆನು
ಕಾಯಿಸಿ ಹಾಲನು
ನಾ ಕುಡಿಸುವನು। ಬಾ ಬಾ ಬಾ

ಕಲಿಸುವೆ ಮಾತನು
ಹೇಳುವೆ ಹಾಡನು
ಗೆಳೆಯರ ಸಂಗಡ
ಕರೆದೊಯ್ಯುವೆನು! ಬಾ ಬಾ ಬಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಗಸದ ಕಾಣಿಕೆ
Next post ಕರ್ನಾಟಕ ಗಡಿ ಸಂಸ್ಕೃತಿಯ ನೆಲೆಗಳು

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…