ಸೂಟಿಯ ಕಾಲ

ಬಂದಿತು ನಾಡಿಗೆ ಬೇಸಿಗೆಯು
ಮುಗಿಯಿತು ವಾರ್ಷಿಕ ಪರೀಕ್ಷೆಯು
ಮಕ್ಕಳಿಗಿದು ವಿಶ್ರಾಂತಿಯ ಕಾಲ
ಆಟ ಕೂಟ ಬಿರು ಬಿಸಿಲಲ್ಲಿ

ನೆಂಟರ ಊರಿಗೆ ತೆರಳುವರು
ಹೊಸ ಹೊಸ ಸ್ಥಳಗಳ ನೋಡುವರು
ಬಗೆ ಬಗೆ ಭಕ್ಷವ ಸವಿಯುವರು
ನಂತರ ಊರಿಗೆ ಮರಳುವರು

ಕೋಶವ ಓದು ದೇಶವ ನೋಡು
ಗಾದೆಯ ಮಾತನು ನಿಜ ಮಾಡು
ಸತತೋದ್ಯೋಗಿ ನೀನಾದಲ್ಲಿ
ಸಾಧಿಸಬಹುದು ಭವಿಷ್ಯದಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಕ್ಕ ಶಾಸ್ತಿ
Next post Tennessee Williams ನ ಬಯಕೆ ಎಂಬ ಭೂತ `The streetcar named Desire’

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…