ಚಿಟ್ಟೆ ಕಿಟ್ಟ

ಬಣ್ಣದ ಚಿಟ್ಟೆ
ತೆಳ್ಳನೆ ಹೊಟ್ಟೆ
ನೋಡಿದ ನಮ್ಮ ಕಿಟ್ಟ
ಹೊಟ್ಟೆಕಿಚ್ಚು ಪಟ್ಟ

ಸಿಹಿಯ ಬಿಟ್ಟ
ತೊರೆದ ನಾಷ್ಟ
ಎರಡೇ ಹೊತ್ತು
ಮಾಡಿದ ಊಟ ಮಾತ್ರ

ಸಂಜೆ ಹೊತ್ತು
ಓಟ ಕಿತ್ತ
ಪಥ್ಯದಿ ಇದ್ದ
ಮಾಸ ಕಳೆದ ಪೆದ್ದ

ಒಂದು ತಿಂಗಳು ನಂತರ
ನೋಡಿಕೊಂಡ ಹೊಟ್ಟೆ
ಆಗಿತ್ತು ತೆಳ್ಳನೆಯ ಚಿಟ್ಟೆ
ಚಿಟ್ಟೆ ಆದೆನೆಂದು ಭಾಳ ಸಂತಸಪಟ್ಟ

ಮತ್ತೆ ಬಲೂನು ಆಗದಂತೆ
ಸತತ ನಿಗಾ ಇಟ್ಟ
ವ್ಯಾಯಾಮವನ್ನು ಮಾಡುವತ್ತ
ಮನಸು ಕೊಟ್ಟ ಕಿಟ್ಟ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೋಮಾತೆ
Next post ಹೆಜ್ಜೆ ಹೆಜ್ಜೆಗೂ ಕಾಸು

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…