ಬೇವು ಬೆಲ್ಲ

ಯಾರಿಗುಂಟು ಯಾರಿಗಿಲ್ಲ
ಮನದ ತುಂಬ ಬೇವು ಬೆಲ್ಲ?

ಚಿತ್ತ ಶಾಂತಿ ಮನದ ಭ್ರಾಂತಿ
ಕುರುಡು ಪ್ರೀತಿ ಮರೆತ ನೀತಿ.

ಅಲ್ಲಿ ಇಲ್ಲಿ ಎದ್ದ ಗುಲ್ಲು
ಮನಕೆ ನೋವು ತಂದ ಸೊಲ್ಲು.

ಹೇಳಲಾರೆ ಬರೆಯಲಾರೆ
ಮರೆಯಲಾರೆ ಹೃದಯಕ್ಕಿಟ್ಟ ಬರೆ.

ಎಲ್ಲರಿಗುಂಟು ನೋವು ನಲಿವು
ಯಾರಿಗಿಲ್ಲ ಇದರ ಅರಿವು?

ಎಲ್ಲ ಮೀರಿ ಬದುಕ ಬೇಕು
ಎಲ್ಲ ನೋಡಿ ನಗಲು ಬೇಕು!

ಬೇವಿನ ಕಹಿಗೆ ಬೆಲ್ಲದ ಸಿಹಿ ಸೇರಿಸಿ
ಜೀವನವ ಪ್ರೀತಿಸಬೇಕು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನೊಲವು ರಾಜಕಾರಣಕೆ ಹುಟ್ಟಿದ್ದಿತೊ
Next post ಸಾಲ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…