ವಿಪರ್ಯಾಸ

ಒಪ್ಪಿದವರು ಬರಲಿಲ್ಲ
ಬಂದವರು ಒಪ್ಪಲಿಲ್ಲ.
ಇವರಿಬ್ಬರ ನಡುವೆ ಬಂದವರು
ತನುಮನ ಅರಳಿಸಲಿಲ್ಲ.

ಕೊಚ್ಚಿ ಹೋಯಿತು ಜೀವನ
ರೊಚ್ಚಿಗೇಳಲಿಲ್ಲ ಮನ
ಸುಖವ ಮರೆತಿತು ತನು
ಅಪ್ಪಿಕೊಂಡಿತು ಮೌನ.

ಸುಖವಿಲ್ಲ ದುಃಖವಿಲ್ಲ
ಸರಸವಿಲ್ಲ ವಿರಸವಿಲ್ಲ
ದಾರಿಯಿದೆ ನೇರಕೆ
ಹೊಂದಿ ನಡೆವುದೆ ಬಾಳುವೆ.

ಒಪ್ಪಿದವರು ಬರಲಿಲ್ಲ
ಬಂದವರ ಒಪ್ಪಲಿಲ್ಲ
ಇವರಿಬ್ಬರ ನಡುವೆ ಬಂದವರು
ತನುಮನ ಅರಳಿಸಲಿಲ್ಲ

ಜೀವನ ಹಸಿರಾಗಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲನ ಗಳಿಗೆ ಬಟ್ಟಲನ್ನು ಕುಡುಗೋಲನ್ನು
Next post ಸವೆಕಲು ನಾಣ್ಯ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…