ಬಾರಕೋಲು

ಹೊಲೆಯ! ಹೊಡೆಯಬೇಡೆಲೋ
ಹಳ್ಳಿ ಎತ್ತನು!
ಕ್ರೂರಿ! ಕನಿಕರಿಲ್ಲವೋ
ಕೊಲ್ಲೊ ಕುತ್ತನು! ೧

ದುಡಿದು ದೇಹವೆಲ್ಲವೂ
ಕೊರಗಿ ಕುಂದಿದೆ!
ಸುಟ್ಟ ಸುಣ್ಣದಂತೆಯೇ
ಸತ್ವಗುಂದಿದೆ! ೨

ಎಲವೊ ನಿನಗಾಗಿಯೇ
ರಕುತ ಸುಟ್ಟಿದೆ!
ತಿಂದ ನಿನ್ನ ಹೊಟ್ಟೆಯೇ
ಉಬ್ಬಿ ಬಿಟ್ಟಿದೆ! ೩

ಕೊಟ್ಟ ಎತ್ತು ಕೊಳ್ಳಲಿಲ್ಲ
ಅಯ್ಯೋ! ಬಾರಕೋಲು!
ಹಸಿದ ಹೊಟ್ಟೆ ತುಂಬಲಿಲ್ಲ
ಮೇಲೆ ಬರಕೊಲು! ೪

ಕೈಯಲಿದ್ದ ಬಾರಕೋಲು
ಕಳಚಿ ಬೀಳಲಿ!
ಸಾಲವಿದ್ದ ಸಾಲಗಾರ
ಸತ್ತು ಹೋಗಲಿ! ೫
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂವ ಬರುವ ಹೊತ್ತು
Next post ವಚನ ವಿಚಾರ – ಸಮತೆ

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…