ಹರಿದಾಡುವ ಮನಸಿಗೆ ಮಚ್ಚಿ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ ||ಪ||
ಕಡು ವಿಷಯದಿ ಸಂಸಾರಕ ಮರಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ ಮಚ್ಚಿ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ ||೧||
ಸಿರಿ ಸಂಪತ್ತು ಸೌಭಾಗ್ಯ ತನಗೆ ಬಲು
ಪಿರಿದಾಗಲಿ ಬೇಕೆಂಬುವ ಮನಸಿಗೆ ಮಚ್ಚಿ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ ||೨||
ವಸುಧಿಯೊಳಗೆ ಶಿಶುನಾಳಧೀಶನ
ಹೆಸರು ಮರೆತು ಕೊಸರ್ಯಾಡುವ ಮನಸಿಗೆ ಮಚ್ಚಿ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ ||೩||
****