ನಿಶ್ಚಿಂತನಾಗಬೇಕಂತೀ

ನಿಶ್ಚಿಂತನಾಗಬೇಕಂತೀ ಬಹು
ದುಶ್ಚಿಂತಿಯೊಳಗೇ ನೀ ಕುಂತೀ
ಯಾಕೋ ಎಲೋ ನಿನಗೀ ಭ್ರಾಂತೀ
ನಾಳಿಗಾಗುವದೀಗಂತೀ ||ಪ||

ಆಶಪಾಶಗಳ ಬ್ಯಾಡಂತಿ ವಳೆ
ಮೀಸಲ ನುಡಿ ಮಾತಾಡಂತೀ
ಭಾಷೆಕೊಟ್ಟು ತಪ್ಪಬ್ಯಾಡಂತೀ
ಹರಿದಾಸರೊಳಗೆ ಮನನೀಡಂತೀ ||೧||

ಅವರನು ಕಂಡರೆ ಅವರಂತೆ
ಮತ್ತಿವರನು ಕಂಡರೆ ಇವರಂತೆ
ಅವರವರರಿಯದೆ ತನಗೂ ತಿಳಿಯದೆ
ಮೂಢನಾಗಿ ಸುಮ್ಮನೆ ಕುಂತೀ ||೨||

ಪೊಡವಿಯೊಳಗೆ ಶಿಶುನಾಳಂತೀ
ದೃಢಗೋವಿಂದಯೋಗಿಯ ಚಿಂತೀ
ಬಿಡದಾತನ ಸೇವೆ ಮಾಡಂತೀ
ಭಯವಿಲ್ಲದ ಗುರುವಿನ ಕೂಡಂತೀ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಿಂಗದೊಳಗೆ ಮನವಿಡದಿನ್ನಾ
Next post ಬೆಳಗಾಗುವ ತನಕ ಕುಳಿತುನೋಡು

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…