ಬನ್ನಿ ಬನ್ನಿ ಮಕ್ಕಳೆ

ಬನ್ನಿ ಬನ್ನಿ ಮಕ್ಕಳೆ
ಒಂದಾಗಿ ಹಾಡುವ
ಯುಗ ಯುಗಗಳೆ ನಾವು |
ಗತ ವೈಭವ ಕಾಣುವ || ಬನ್ನಿ ||

ಕಾಶ್ಮೀರವಿದುವೆ ಮುಕುಟ |
ಕನ್ಯಾಕುಮಾರಿ ಇದುವೆ ಪದತಲ ||
ಹಸಿರ ಉಟ್ಟ ಸಿಂಗಾರ |
ಹೂವುಗಳದುವೆ ಬಂಗಾರ || ಬನ್ನಿ ||

ವೀರಕಲಿಗಳ ಕೀರ್ತಿ ಆಭರಣ
ಶೃಂಗಾರ ರಸ ಕಾವ್ಯವೆ ಅಮೃತಪಾನ || ಬನ್ನಿ ||

ಮುದಗೊಳಿಸುತ ನಮ್ಮ ಮನ |
ಪವಡಿಸುವ ನಾವು ಅವಳ ಮಡಿಲಲ್ಲಿ ||
ನಮ್ಮದೇ ಧನ್ಯ ಜೀವನ|| ಬನ್ನಿ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಸಾರ ಪರಮಾತ್ಮ
Next post ದುಃಖ

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…