Home / ಕವನ / ತತ್ವಪದ / ಡಂಭಗಳೇಕೆ!

ಡಂಭಗಳೇಕೆ!

ಮನುಜ ಬದುಕಿನ ಬವಣೆಯಲಿ
ಬೆಂದು ಹೋಗಬೇಡ
ಪತಂಗ ಬೆಳಕಿಗಾಗಿ ಜಲಿಸಿದಂತೆ
ಕಂದು ಹೋಗಬೇಡ

ರಜನಿಗಳಲಿ ಚಂದ್ರ
ಬಾರದಿದ್ದರೆ ಆಮಾವಾಸ್ಯೆ
ದೇಹದಲ್ಲಿ ಆತ್ಮನಿದ್ದರೂ
ಮರೆತಿದ್ದರೆ ಸಮಸ್ಯೆ

ನಿನ್ನ ಆಯುಷ್ಯದ ಎಳೆ ಎಳೆ
ಜಾರುತ್ತಿದೆ ಪ್ರಪಾತಕ್ಕೆ
ಅರಿಯದೆ ಮೋಜಿನಲಿ ನಲಿದರೆ
ಉರುಳುವೆ ನರಕಪಾತಕ್ಕೆ

ಬಂಧು ಭಾಂಧವರೆಲ್ಲ ನಿನಗೆ
ಎಷ್ಟೊತ್ತಿನವರೆಗೆ
ನಿ ತೀರಿದರಾಯ್ತು ಅವರು
ಬರುವರು ಸ್ಮಷಾನದವರೆಗೆ

ಆಕಾಶದೆತ್ತರಕ್ಕೆ ಆಸೆ
ಲೋಭಗಳೇಕೆ
ಮಾಣಿಕ್ಯ ವಿಠಲನರಿಯದೇ
ಢಂಬಗಳೇಕೆ
*****

Tagged:

Leave a Reply

Your email address will not be published. Required fields are marked *

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...