ಗೆಂಡೆತಿಮ್ಮ ಉವಾಚ

ಮೂರು ಗುಂಡು ಹಾಕಿ
ಆ ಗಾಂಧಿಯನ್ನು ಕೊಂದರಂತೆ
ನೂರು ಗುಂಡುಹಾಕಿದರೂ
ನಾ ಸಾಯಲೊಲ್ಲೆ
ಅಂಥಾದ್ದು ನನ್ನ ಮಹಾತ್ಮೆ
ನನ್ನ ಹೃದಯಕ್ಕೆ
ಗುಂಡು ತಾಗುವುದಿಲ್ಲ
ಯಾಕೆಂದರೆ ನನಗೆ ಹೃದಯವೇ ಇಲ್ಲ !
ಇದ್ದರೂ ಅದು ಹೃದಯವಲ್ಲ
ಹೃದಯವಾಗಿದ್ದರೂ ಅದು
ಮನುಷ್ಯರದಲ್ಲ
ನಾನು ಗೆಂಡೆತಿಮ್ಮ
ಯಾರಯ್ಯಾ ನನ್ನ ಕೊಲ್ಲಬಲ್ಲವರು ?
ಸತ್ತವನ ಮತ್ತೆ ಸಾಯಿಸುವ ಪರಾಕ್ರಮಶಾಲಿ
ನಿಮ್ಮಲ್ಲಿ ಯಾರಯ್ಯಾ ಇದ್ದಾರೇ ?
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಶಗ್ರಂಥ ವ್ಯಾಕರಣ ಪ್ರಸಂಗದಿ
Next post ಸಮ್ಮಿಲನ

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…