ರತ್ನನ್ ಪರ್‍ಪಂಚ

ಯೋಳ್ಕೊಳ್ಳಾಕ್ ಒಂದ್ ಊರು
ತಲೇಮ್ಯಾಗ್ ಒಂದ್ ಸೂರು
ಮಲಗಾಕೆ ಬೂಮ್ತಾಯಿ ಮಂಚ;
ಕೈ ಯಿಡದೋಳ್ ಪುಟ್ನಂಜಿ
ನೆಗನೆಗತ ಉಪ್ಗಂಜಿ
ಕೊಟ್ರಾಯ್ತು ರತ್ನನ್ ಪರ್‍ಪಂಚ! ೧

ಅಗಲೆಲ್ಲ ಬೆವರ್ ಅರ್‍ಸಿ
ತಂದದ್ರಲ್ ಒಸಿ ಮುರ್‍ಸಿ
ಸಂಜೇಲಿ ವುಳಿ ಯೆಂಡ ಕೊಂಚ
ಯೀರ್‍ತ ಮೈ ಝುಂ ಅಂದ್ರೆ
ವಾಸ್ನೆ ಘಂ ಘಂ ಅಂದ್ರೆ
ತುಂಭೋಯ್ತು ರತ್ನನ್ ಪರ್‍ಪಂಚ! ೨

ಯೇನೋ ಕುಸಿಯಾದಾಗ
ಮತ್ತ್ ಎಚಿ ವೋದಾಗ
ಅಂಗೇನೆ ಪರಪಂಚದ್ ಅಂಚ
ದಾಟ್ಕಂಡಿ ಆರಾಡ್ತ
ಕನ್ನಡದಲ್ ಪದವಾಡ್ತ
ಯಿಗ್ಗೋದು ರತ್ನನ್ ಪರ್‍ಪಂಚ! ೩

ದುಕ್ಕಿಲ್ಲ ದಾಲಿಲ್ಲ
ನಮಗ್ ಅದರಾಗ್ ಪಾಲಿಲ್ಲ
ನಾವ್ ಕಂಡಿಲ್ಲ್ ಆ ತಂಚ ವಂಚ
ನಮ್ಮಸ್ಟಕ್ ನಾವಾಗಿ
ಇದ್ದಿದ್ರಲ್ಲ್ ಆಯಾಗಿ
ಬಾಳೋದು ರತ್ನನ್ ಪರ್‍ಪಂಚ! ೪

‘ಬಡತನ ಗಿಡತನ
ಯೇನಿದ್ರೇನ್? ನಡತೇನ
ಚೆಂದಾಗ್ ಇಟ್ಕಳ್ಳಾದೆ ಅಚ್ಛ!’
ಅಂದ್ಕೊಂಡಿ ಸುಕವಾಗಿ
ಕಸ್ಟಕ್ ನೆಗಮೊಕವಾಗಿ
ನೆಗೆ ಯೋದೆ ರತ್ನನ್ ಪರ್‍ಪಂಚ! ೫

ದೇವ್ರ್ ಏನ್ರ ಕೊಡಲಣ್ಣ
ಕೊಡದಿದ್ರೆ ಬುಡಲಣ್ಣ
ನಾವೆಲ್ಲ ಔನೀಗೆ ಬಚ್ಛ!
ಔನ್ ಆಕಿದ್ ತಾಳ್ದಂಗೆ
ಕಣ್ ಮುಚ್ಕೊಂಡ್ ಯೋಳ್ದಂಗೆ
ಕುಣಿಯಾದೆ ರತ್ನನ್ ಪರ್‍ಪಂಚ! ೬
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಹಿಳಾ ಸಾಹಿತ್ಯದ ತಾತ್ವಿಕ ಆಯಾಮಗಳು
Next post ಅಪ್ಪ ಸತ್ತಾಗ!

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…