ಅಲ್ಲಮ ಪ್ರಭು

ಮನದ ಬಯಲಲಿ ಬವಣೆಗೊಂಡೆ, ಬಿಸಿಲಿನ ಝಳದೆ
ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ-
ನೀರ, ನೇಹಿಗ, ನಂಟ, ಬಂಟ, ಸಂವಾದಿ, ಗುರು,
ಶಿಷ್ಯ, ಪ್ರೀತಿಯ ಚಾತಿಗಾರ! ಎಲ್ಲಿರುವೆ ರಸ-
ಸಿದ್ಧ ಗೋರಕ್ಷನುಕ್ಕಿಲೆ ಹೊಯ್ದರೂ ಮುಕ್ಕು
ತುಕ್ಕರಿಯದಿದ್ದ ಮೈಕವಚ ಕಳೆದಿಡುವಂತೆ
ಕೆಳಗಿರಿಸಿ, ಕದಳಿಯಲ್ಲಡಗಿ ಕಾಣದೆ ಹೋದ,
ಲಿಂಗ ಲೀಲಾವಿಲಾಸದಲಿ ನಟಿಸದ ಮೂರ್‍ತಿ?

ವಚನ ವಿದ್ಯಾನಟಿಯು ಕುಣಿಕುಣಿದಳಂದು, ಮ-
ದ್ದಳೆಯ ಸೊಲ್ಲಿಗೆ ವಿವಿಧ ಭಂಗಿಯಲಿ; ಶೂನ್ಯದಲಿ
ಹುಟ್ಟುಗಟ್ಟಿತು ಹದುಳದೊಂದು ಹುಣ್ಣಿಮೆ; ಬೆಡಗು
ಬಿನ್ನಾಣ ಬಿಡಿಸಿ, ಬೆಳುದಿಂಗಳವ ಕುಡಿದ ಮಧು-
ಮತ್ತ ಚಿತ್ತ-ಚಕೋರ ಕೇಳುತಿದೆ, ಹೇಳುತಿದೆ –
“ಬೇರೆ ದರುಶನವೇಕೆ? ಮಾತೆ ಜ್ಯೋತಿರ್‍ಲಿಂಗ?”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮೀನಗಡದ ಸಂತೆ
Next post ಬಲೆ ಜಿಪ್ಣ ಮುನಿಯ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…