ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?

ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?-
ಬೇಡಿದುದ ಕೊಡೆ, ಬೇಡದುದನಾಯ್ದು ಕೊಡುವೆ!
ಆರದುದನಾಪೆನೆಂದೇಕೆ ತಡಬಡುವೆ?
ಕೇಳುವೊಡನೀವೆನೆಂದೇಕ ಬೇಡಿಸುವೆ? ೪

ಆದೊಡಂ ಕೇಳೆನಗೆ ನಿನ್ನಿಂದು ಬೇಡ-
ಅವಳನೆನ್ನಿಂದೊಯಿದ ಇಂದೆನಗೆ ಬೇಕೆ?
ಇನ್ನವಳ ಕಾಣಿಸದ ನಾಳೆಯಕಟೇಕೆ?
ಅವಳಿದ್ದ ನಿನ್ನೆ ಸಾಕೆನಗದಂ ನೀಡ! ೮

೧ಇಂದಿನಳುವೆಯ ನುಗ್ಗುತೆದೆ ನಾಳೆಯತ್ತಂ
ಸುಖದಿ ಹೊರಮೊಗಗೊಂಡು ಹರಿಯಲದು ನೇರೆ,
ಅಳಲೊಳಿಳಿಮೊಗಮಾಗಲಾಸೆ ಮರಳುತ್ತಂ
ಹಾಯ್ವುದಿಂದನು ನಿನ್ನೆಗಳ ಕಡಲ ಸೇರೆ ೧೨

ಆದುದರಿನಾಪಡಿದೊ ಹಿಂದಿರುಗಿಸೆನ್ನ,
ನಿನ್ನೆಗಯ್ದಿಸು-ಬೇರೆ ನಾನೆರೆಯೆ ನಿನ್ನ
*****
೧ ಅಳುವೆ=ಹೊಳೆ ಕಡಲನ್ನು ಸೇರುವ ಬಾಯಿ (bar)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಪರ್‍ಯಾಸ
Next post ಅಸ್ಥಿಪಂಜರಗಳ ಕತೆ

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…