ತಕ್ಕಡಿಗಳು

ಮತ್ತೆ ಕತ್ತಲು
ಆಳದಿಂದೆದ್ದ ತಕ್ಕಡಿಗಳು
ರಂಗಸ್ಥಳವೇರಿ ತಕಥೈ
ನರ್ತಿಸುತ್ತಾ ಬೆತ್ತಲು.

ಈಗೆಲ್ಲವೂ ತಲೆಕೆಳಗು
ಗೆದ್ದಲು ಹಿಡಿದ ಒಳಗು
ಬೊಟ್ಟಿಟ್ಟ ಭಾರದ ತಟ್ಟೆ
ಮೇಲೇರುತ್ತಲೇ ಕುಣಿಯುತ್ತದೆ.

ಖಾಲಿ ತಕ್ಕಡಿ ತಟ್ಟೆ
ಭಾರವಿಲ್ಲದೆಯೂ
ಸರ್ರನೆ ಕೆಳಗಿಳಿದು
ನೆಲದಲ್ಲೇ ಬಿದ್ದುಕೊಳ್ಳುತ್ತದೆ.

ತಪ್ಪುಗಳು ಸರಿಯೆನಿಸಿ
ಸರಿಗಳು ತಪ್ಪುಗಳಾಗಿ
ಬೆತ್ತಲಾಗುತ್ತಾ ಕುಣಿವ
ನಗ್ನಸತ್ಯಗಳು ಬೆಪ್ಪು – ತಕ್ಕಡಿಗಳು.

ತಪ್ಪು – ಸರಿಗಳ ಲೆಕ್ಕ ಹಿಡಿದು
ಕಾಡುವ ತಕ್ಕಡಿಗಳು
ಇರಲೂ ಬಿಡದ
ಇರದಿರಲೂ ಬಿಡದ ದ್ವಂದ್ವಗಳು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪರೆ
Next post ಕೆಳಾಕ್ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅಂತಾನ್ರಿ ಕೊಮಾರರಾಮ!

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…