ಬಾರೇ ಬಾರೇ ನನ್ನವಳೇ

ಆ ಹೂವ ಈ ಹೂವ ಕೊಯ್ಯುವಳೇ
ಆ ದಂಡಿ ಈ ದಂಡೀ ಕಟ್ಟುವಳೇ || ೧ ||

ಆ ಹೂವ ಈ ಹೂವ ಮುಡಿಯುವಳೇ
ಆ ಕುಣಿತ ಈ ಕುಣಿತ ಕೊಣಿಯುವಳೇ || ೨ ||

ಮಲಕೂ ಮಲಕೂ ನಡಿಯುವಳೇ
ಆ ಕುಣಿತ ಈ ಕುಣಿತ ಕೊಣಿಯುವಳೇ || ೩ ||

ಅತ್ತಾ ಇತ್ತಾ ನೋಡುವಳೇ
ಬಾರೇ ಬಾರೇ ನನ್ನವಳೇ || ೪ ||
*****
ಹೇಳಿದವರು: ದಿ. ಸಣಕೂಸ ಆಗೇರ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಯ ಪಾಡು – ೨೩
Next post ಶುದ್ಧ ಸುಳ್ಳಲ್ಲವೇ? ಯುದ್ಧದೊಳು ಗೆಲುವೇನು?

ಸಣ್ಣ ಕತೆ

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…