Home / ಕವನ / ಕವಿತೆ / ಕನ್ನಡದಾ ಬಾವುಟ

ಕನ್ನಡದಾ ಬಾವುಟ

ಕನ್ನಡದಾ ಬಾವುಟವ ಹಾರಿಸಬನ್ನಿ
ಕನ್ನಡದಾ ಕಹಳೆಯ ಮೊಳಗ ಬನ್ನಿ
ಕನ್ನಡದಾ ದೀವಿಗೆ ನೀವಾಗಿ ಬನ್ನಿ
ಕನ್ನಡಿಗರು ನಾವೆಂದು ಎದೆ ತಟ್ಟಿ ಬಾಳಿ||

ಕೆಂಪು ಹಳದಿ ಬಣ್ಣದ ಧ್ವಜವ ಹಿಡಿದು
ವೀರಗಾಥೆಯ ತಿಲಕವನ್ನು ಹಣೆಯ ಮೇಲೆ ಇಟ್ಟು
ಐಕ್ಯತೆಯ ಭಾವುಕದ ಮೆರಗನ್ನು ಕೊಟ್ಟು
ಕನ್ನಡಿಗರು ನಾವೆಂದು ಎದೆ ತಟ್ಟಿ ಬಾಳಿ ||

ಇಟ್ಟ ಹೆಜ್ಜೆ ತೊಟ್ಟ ದೀಕ್ಷೆಕೊಟ್ಟ ಭಾಷೆ
ಮಾನರಕ್ಷೆ ಅಭಿಮಾನ ಪ್ರಾಣಕ್ಕೆ ಮಿಗಿಲು
ಇತಿಹಾಸ ಸಂಸ್ಕೃತಿಯ ಒಕ್ಕಲುತನ ಬೆಳೆದು
ಕನ್ನಡಿಗರ ಕೀರ್ತಿ ಉತ್ತುಂಗವೇರಲಿ ಎಂದೆಂದು||

ತನುಮನ ಕನ್ನಡ ನುಡಿ ಕನ್ನಡ ಬಾಳ್ಗೆ
ಜನಕನ್ನಡ ಗಣಕನ್ನಡ ನಡೆಕನ್ನಡ ಏಳ್ಗೆ
ಸಿರಿತನದ ಅನುಭಾವ ಹಸಿರಾಗಿರಲಿ ಗೆಲ್ಗೆ
ಕನ್ನಡಿಗರು ನಾವೆಂದು ಮನ ಮುಟ್ಟಿ ಕಾಣ್ವೆ||
ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...