ನಂಜಿ ರತ್ನ ತೋಟ್ಕ್ ಓಗಿದ್ರು

ನಂಜಿ ರತ್ನ ತೋಟ್ಕ್ ಓಗಿದ್ರು
ಒಂದಾರ್‌ ಮಾತಾಡ್ನಿಲ್ಲ;
ಔರ್ಗೊಳ್ ಮಾತಾಡ್ನಿಲ್ಲಾಂತಲ್ಲ-
ಆಡೋಕ್ ಮನಸಾಗ್ನಿಲ್ಲ. ೧

ನಂಜಿ ರತ್ನಂಗ್ ತೋರಿದ್ಲೊಂದು
ದುಂಬಿ ತಬ್ಬಿದ್ ಊವ!
ರತ್ನನ್ ಮನಸಿನ್ ಅಡಗ್ ಸೇರಿತ್ತು
ನಂಜಿ ಮನಸಿನ್ ರೇವ! ೨

ಮನಸಿನ್ ಜೋಡಿ ಯೀಣೆ ಮುಂದೆ
ಬಾಯಿನ್ ಬುಡುಬುಡಕೇನ!
ಮಾತ್ ಇಲ್ದೇನೆ ಅರ್‍ತ್ ಆಗ್ತಿದ್ರೆ-
ಆಡೋನ್ ಮನಸ್ನ? ಕೋಣ! ೩
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೃಹಿಣಿ
Next post ಸ್ತ್ರೀ ವ್ಯಕ್ತಿತ್ವ ವಿಕಸನದ ಅಡೆತಡೆಗಳು ವಸ್ತ್ರ ಸಂಹಿತೆ – ಗೋಷಾ ಪದ್ಧತಿ

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…