ನಂಜೀಗೆ

ನೀ ನನ್ ಅಟ್ಟೀಗ್ ಬೆಳಕಂಗ್ ಇದ್ದೆ ನಂಜು!
ಮಾಗೀಲ್ ಉಲ್ಮೇಲ್ ಮಲಗಿದ್ದಂಗೆ ಮಂಜು!
ಮಾಗಿ ಕುಗ್ತು!
ಬೇಸ್ಗೆ ನುಗ್ತು!
ಇದ್ಕಿದ್ದಂಗೆ ಮಾಯವಾಗೋಯ್ತು ಮಂಜು!
ನಂಗೂ ನಿಂಗೂ ಯಂಗ್ ಅಗಲೋಯ್ತು ನಂಜು! ೧

ಸೀರಂಗ್ಪಟ್ಣದ್ ತಾವ್ ಕಾವೇರಿ ಒಡದಿ
ಯಳ್ಡೋಳಾಗಿ ಪಟ್ಣದ್ ಸುತ್ತ ನಡದಿ
ಸಂಗಂದಲ್ಲಿ
ಸೇರ್‍ಕೊಂಡ್ ಮಳ್ಳಿ
ಮುಂದಕ್ ವೊದ್ದು ನಮಗೆ ಗ್ನಾನದ್ ಪಂಜು!
ಈಗ್ ಅಗಲಿದ್ರೇನ್ ಮುಂದ್ ನಾವ್ ಸೇರ್‍ತೀವ್ ನಂಜು! ೨

ಅಗಲೋಡೋಗ್ತೆ ರಾತ್ರಿ ಬಂತಂತ್ ಅಂಜಿ!
ರಾತ್ರಿ ಮುಗದೋದ್ರ್ ಅಗಲೆ ಅಲ್ವ ನಂಜಿ?
ರಾತ್ರಿ ಬಿತ್ತು!
ಅಗಲೇ ಬತ್ತು!
ಓಗೋದ್ ಮಳ್ಳಿ ಬರೋದ್ಕೆ ಅಲ್ವ ನಂಜಿ?
ಆ ನೆಮ್ಕೆ ನನ್ ಜೀವಾನ್ ಉಳಸೊ ಗಂಜಿ! ೩
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇರವು-ಅರಿವು

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…