Home / ಕವನ / ಕವಿತೆ / ಅರ್‍ಪಣ-ತರ್‍ಪಣ

ಅರ್‍ಪಣ-ತರ್‍ಪಣ

“ಪುಷ್ಪವಿದ್ದಂತೆ ಮೊಗ್ಗೆಯನರ್‍ಪಿಸಿಕೊಂಡ ಶಿವನು!
ಪಕ್ವವಾದ ಫಳವಿದ್ದಂತೆ ಕಸುಗಾಯ ಕೊಯ್ಯನು ಶಿವನು!
-(ಬಾಲ ಸಂಗಯ್ಯನ ಮರಣ ಕಾಲಕ್ಕೆ ಬಸವದೇವನ ವಿಲಾಪ)
ಕೊಳಲಾಗಬಹುದಾಗಿತ್ತು, ಕಳಿಲಿದ್ದಾಗಲೇ ಕಡಿದ ಕಾಳ!
ದೇವ! ಮಗುವೆಂದು ತಿಳಿದಿದ್ದೆ ಆದಾಯಿತು ನೀರ್‍ಗುಳ್ಳಿ!
ಮನೆಯವನೆಂದು ತಿಳಿದಿದ್ದೆ ಅವನಾದ ಅತಿಥಿ!
ಕಣ್ತುಂಬ ಕಾಣಲಿಲ್ಲ; ಬಾಯ್ತುಂಬ ಮುದ್ದಿಡಲಿಲ್ಲ;
ಮನೆಯ ಮಮತೆಯ ಮೂರ್‍ತಿಯಾದೀತೆಂದಿದ್ದೆ-
ಆದರೆ-ಎಂಜಲು ಮಾಡಿದ್ದಿಲ್ಲ! ಆಯ್ತು-ಮಸಣದ-
ಮಹಾದೇವನ ಮುಡಿಯೊಳಗಿನ ಮೀಸಲ ಮದಗುಣಕಿ.
ಹುಳಹುಪ್ಪಡಿಯ ತಿನಸಾಯಿತು ಮೋಹದ ಮುದ್ದೆ !
ಜೀವಗಳೆದ ದೇಹವನ್ನು ಕಣ್ಣೀರ್‍ಸುರಿಸಿ ಕೊಟ್ಟೆ ಕೃಷ್ಣಾ-
ರ್‍ಪಣವೆಂದು. ಪಿತನ ಪಾಪದ ಪಿಂಡ ಕಣ್ಮರೆಗಾಯಿತು;
ಮಣ್ಮರೆಯಾಯ್ತು; ಕಂಗೊಳಿಸಲಕಲ್ಪನೆಯ ಪುಣ್ಯ ಪುಂಜ.
ಮಾತೆಯ ಶಾಪದ ಮೂರ್‍ತಿ ಬಯಲಾಯಿತು;
ಮುಸುಕಲಿ ಮಮತೆಯ ಧೂಪ ಮನೋರಾಜ್ಯದಲ್ಲಿ.
ನಿಮಿತ್ತ ಮಾತ್ರ, ಕ್ಷಣಿಕವಾಗಿ ಬಂದ ಕೂಸೇ!
ಸಂಸಾರದ ಸವಿ ಸುಖ ದುಃಖದ ಸರಿಬೆರಿಕೆಯೆಂದು ಕಲಿಸಿದೆ.
ಆದರೆ, ನಿಜವಾದ ಅಖಂಡ ಪ್ರೀತಿಝರಿಯನ್ನು ಪ್ರವಹಿಸಿದೆ.
ಅದರ ತೀರನಿವಾಸಿಯಾದ ಈ ವಾಣಿ ಹಾಡುವದು,
ಕ್ಷೇಮೇಂದ್ರ!
ನಿನ್ನ ನಾಮಾಂಕಿತ ನಾಮದ ಸನ್ಮಾನಕ್ಕಾಗಿ,
ಅಜ್ಜಿ ಅಮ್ಮಂದಿರ ಸಮಾಧಾನಕ್ಕಾಗಿ,
ನನ್ನ ಮನದ ಸುಮ್ಮಾನಕ್ಕಾಗಿ,
ಈ ಕಾವ್ಯ ತಂದೆ ಕೊಟ್ಟ ಮುದ್ದು.
*****
Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...