Home / ಲೇಖನ / ವಿಜ್ಞಾನ / ವಿಶಿಷ್ಟ ಬಗೆಯ ಪಿಸ್ತೂಲು

ವಿಶಿಷ್ಟ ಬಗೆಯ ಪಿಸ್ತೂಲು

ಅಮೇರಿಕೆಯ ಫೋಲಿಸ್ ಇಲಾಖೆಯ ತಜ್ಞರು ಹೊಸ ಬಗೆಯ ಪಿಸ್ತೂಲುಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ತಜ್ಞರು ಅಭಿವೃದ್ಧಿ ಪಡಿಸಿದ ಈ ಪಿಸ್ತೂಲನ್ನು ಬಳಸಬೇಕಾದರೆ ನಿರ್ದಿಷ್ಟವಾದ ಒಂದು ಉಂಗುರವನ್ನು ಧರಿಸಬೇಕಾಗುತ್ತದೆ. ಈ ಉಂಗುರದ ವಿಶಿಷ್ಟವಾದ ವಿನ್ಯಾಸವನ್ನು ಪಿಸ್ತೂಲು‌ ಗುರುತಿಸಲ್ಪಡುತ್ತದೆ. ಮತ್ತೊಂದು ಬಗೆಯ ಪಿಸ್ತೂಲು ಮಾಲಿಕನ ಧ್ವನಿಯನ್ನು ಗ್ರಹಿಸುವಂತಹದ್ದಾಗಿದೆ. ಇನ್ನೊಂದು ಬಗೆಯ ಪಿಸ್ತೂಲು ಕೈ ಬೆರಳಚ್ಚನ್ನು ಗುರುತು ಹಿಡಿದು ಕೆಲಸ ಮಾಡುವಂಥಹದ್ದಾಗಿದೆ. ನ್ಯೂಮೆಕ್ಸಿಕೋದಲ್ಲಿರುವ ಸ್ಯಾಂಡಿಯಾ ರಾಷ್ಟ್ರೀಯ ಪ್ರಯೋಗಾಲಯವು ದೂರ ಸಂವೇದಿ ತಂತ್ರಜ್ಞಾನವನ್ನು ಬಳಸಿಕೊಂಡು ಕೆಲಸಮಾಡುವಂತಹ ಪಿಸ್ತೂಲನ್ನು ಅಭಿವೃದ್ದಿಪಡಿಸಿದೆ. ಪಿಸ್ತೂಲು ಇಡಲು ಬಳಸಲು ಕವಚವನ್ನು ಇದಕ್ಕಾಗಿ ವಿಶೇಷ ರೀತಿಯಲ್ಲಿ ತಯಾರಿಸಬೇಕಾಗುತ್ತದೆ. ಕವಚದಲ್ಲಿ ಪಿಸ್ತೂಲನ್ನು ಇರಿಸುವಾಗ ಅದು ನಿಷ್ಕ್ರಿಯವಾಗಿರುತ್ತದೆ. ಕವಚದಿಂದ ಹೊರೆತೆಗೆದಾಗ ಮಾತ್ರ ಅದು ಕ್ರಿಯಾಶೀಲಗೊಳ್ಳುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...