Home / ಕವನ / ಕವಿತೆ / ಭಾವದೀಪ

ಭಾವದೀಪ

ನೆಲವು ಕಾದು, ಅಂಗಾಲು ಕಾದು, ಮೈ ಕಾದು ಉರಿದು ನೆತ್ತಿ
ಬಿಸಿಲ ಎಣ್ಣೆಯಲಿ ಹೊತ್ತಿ ಆದೆ ನಾ ಬೆಂಕಿಗೊಂಡ ಬತ್ತಿ
ಕಣ್ಣು ಉರಿದು ಕೆಂಗೆಂಡವಾಗಿ ಭಗ ಭಗನೆ ಬಾನ ಭಾಗ
ನೆತ್ತಿಯಲ್ಲಿ ಸುಡುತಿದ್ದ ಸೂರ್ಯ ಕತ್ತೆತ್ತಿ ನೋಡಿದಾಗ.

ಮಣ್ಣು ನೆಲದ ಈ ಅನ್ನಪಿಂಡ ಉರಿಯಾಗೆ ಉಸಿರ ತಿದಿಗೆ
ಬದಿಗೆ ಹರಿಯುತಿದೆ ತಣ್ಣನೀರು ಸುಖವಾಗಿ ಸುಖದ ನದಿಗೆ
ನೀರಿನಲ್ಲಿ ಕಾಲಿಟ್ಟೆ ಮಾತ್ರ ನಾನಂದಿ ನನಗೆ ಹೊರತು
ಜಲಕ್ರೀಡೆಯಾಡುತ್ತಲಿದ್ದ ರವಿ ಕೂಡ ತಾಪ ಮರೆತು.

ತಂಪು ಜೊಂಪು ಏರಿತ್ತು ತಲೆಗು ಹುಟ್ಟಿತ್ತು ಕುಸುಮ ಕಂಪ
ನಾಡಿ ನಾಡಿ ಜುಣುಗುಡುತ ಬಂತು ನಾನಾದೆನೋ ನಿಲಿಂಪ
ಯಾವ ನಾಡೊ ಇದು ಗಾಳಿ ತೀಡುತಿದೆ ಯಾರೂ ಹಾಡಿದಂತೆ
ಉಸಿರ ಪಂಜರವು ಭಗ್ನವಾಗಿ ನಾ ನಗ್ನನಾಗಿ ನಿಂತೆ.

ಏನು ದೇವ! ಓ ನಾನು ದೇವ ಈ ಭಾನು ದೇವ ಸುಡನೇ
ಬಯಲ ಹಾರಹೊಡೆವಿರಲು ಬಯಲು ಬಯಲಾಯ್ತು ಬಯಲಿನೊಡನೆ
ಸುತ್ತಲೆತ್ತಲೂ ಶಮವು ತಮವು, ನಂದಿಸಿತು ನಂಜು ನೋವ
ಗಾಜುಗೊಳವಿಯಲಿ ದೀಪ ಬೆಳಗಿದೊಲು ಬೆಳಗುತಿತ್ತು ಭಾವ.
*****

Tagged:

Leave a Reply

Your email address will not be published. Required fields are marked *

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...