Home / ಕವನ / ಕವಿತೆ / ಯಾರೇ… ?

ಯಾರೇ… ?

ಇದು ಕಲಿಕಿಯಲ್ಲ,
ಏನೋ ಬೆರಿಕಿ
ಅಲ್ಲಲ್ಲಿ ತುರಿಕೆ ಬಂದಽದ ಮುಂದ
ಇರಬೇಕು ಏನೊ ಇತಿಹಾಸ ಹಿಂದ.

ಹೀಂಗಾದರ ಹ್ಯಾಂಗ ಅನಬ್ಯಾಡ
ಇದ್ದಾನ ಶಿವಾ ಮ್ಯಾಲ
ಶಕ್ತಿ ಆಟಂತ
ಭಲೆ ಭಲೆ ಜನರು ಮುಣುಗ್ಯಾರ
ಶಿವ ಶಿವಾ ಕೊನಿಗೆ ಅಂದಾರ.

ಈ ಸೆರಗು ಹರಕೊಂಡ ಸಗತಿ
ಬಾಳೆ ಬಟ್ಟೈತಿ
ಇದಕಿಲ್ಲ ಕೊರಳ ಗುಳದಾಳಿ
ಬೆಂದಿಲ್ಲಿದರ ಬ್ಯಾಳಿ
ಬೀದಿ ಗೂಳಿ ಬೆನ್ನ ಹತ್ತೆತಿ
ಇದರ ಕೊನೀ ಗೊತ್ತೈತಿ.

ತಿವದಾಗ ಕಟ್ಟೈತಿ ನಮ್ಮ ಮನಿ
ಶಕ್ತಿ ಅಲ್ಲೆ ಸನಿ.
ಕೆಲವರ ಗುಡಿಸಲು ಶೂನ್ಯದ ಬಯಲಾಗ
ಅವರವರ ಸತ್ಯ ಅವರವರ ಪಾಲು.

ಕೂಡಿರತದ ಹಾಲೂ ನೀರು
ಹಂಸಕ್ಕ ಗೊತ್ತು ಆ ಬೇರು
ಮಲ ಬ್ಯಾರೆ ಕಮಲ ಬ್ಯಾರೆ
ಯಾರೇ ಇರಲಿ ಅದು ಯಾರೆ ಯಾರೆ ಯಾರೆ.-
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...