Home / ಕವನ / ಅನುವಾದ / ಕಾರಿಹೆಗ್ಗಡೆಯ ಮಗಳು

ಕಾರಿಹೆಗ್ಗಡೆಯ ಮಗಳು

ಪಡುವದಿಬ್ಬದ ಗೌಡನೊಬ್ಬನು
ಬಿಡದೆ ತೊರೆಯನ ಕೂಗಿಕೊಂಡನು;
ತಡೆಯದೀಗಲೆ ಗಡುವ ಹಾಯಿಸು,
ಕೊಡುವೆ ಕೇಳಿದ ಹೊನ್ನನು.
ಆರು ನೀವೀ ಕರುಗಿ ಮೊರೆಯುವ
ನೀರ ಕಾಯಲ ಕಾಯುವವರು?
ಪಡುವದಿಬ್ಬದ ಗೌಡ ನಾನೀ
ಮಡದಿ ಕಾರಿಯ ಕುವರಿಯು.
ಓಡಿ ಬಂದೆವು ಮೂರು ದಿವಸ;
ಜಾಡ ಹಿಡಿದು ಹಿಂದೆ ಬಂದರು;
ನಮ್ಮ ನೀಕಣಿವೆಯಲಿ ಕಂಡರೆ
ಚಿಮ್ಮಿ ಹರಿವುದು ನೆತ್ತರು.
ಹತ್ತಿ ಕುದುರೆಯ ತರುಬಿ ಬರುವರು,
ಮುತ್ತಿಕೊಂಡರೆ ನನ್ನ ಕೊಲುವರು;
ಘೋರದುಃಖದ ನಾರಿಯನು ಬಳಿ
ಕಾರು ನಗಿಸಲು ಬಲ್ಲರು?
ಆಗ, ಅಂಜದೆ ತೊರೆಯನೆಂದನು;
ಬೇಗ, ಜೀಯಾ, ಓಡ ತರುವೆನು.
ಸುಡಲಿ ಹೊನ್ನು, ಬೆಡಗಿ ನಿನ್ನೀ
ಮಡದಿಗೋಸುಗ ಬರುವೆನು.
ಆದುದಾಗಲಿ, ಮುದ್ದಿನರಗಿಣಿ
ಗಾದ ಗಂಡವ ಕಾದುಕೊಡುವೆನು.
ಕಡಲು ನೊರೆಗಡೆದೆದ್ದು ಕುದಿಯಲಿ
ಗಡುವ ಹಾಯಿಸಿ ಬಿಡುವೆನು.
ತೂರುಗಾಳಿಗೆ ಕಡಲು ಕುದಿಯಿತು,
ನೀರ ದೆವ್ವಗಳರಚಿಕೊಂಡುವು.
ಹೆಪ್ಪು ಮೋಡದ ಹುಬ್ಬುಗಂಟಿಗೆ
ಕಪ್ಪಗಾದುವು ಮುಖಗಳು.
ಕೆರಳಿ ಕೆರಳಿ ಗಾಳಿ ಚಚ್ಚಿತು;
ಇರುಳ ಕತ್ತಲೆ ಕವಿದು ಮುಚ್ಚಿತು;-
ಕಣಿವೆಯಿಳಿವರ ಕುದುರೆ ಕತ್ತಿಯ
ಖಣಿಖಣಿಧ್ವನಿ ಕೇಳಿತು!
ಏಳು, ಬೇಗೇಳಣ್ಣ, ಎಂದಳು;
ಹೂಳಿಕೊಳಲಿ ನನ್ನ ಕಡಲು,
ಮುಳಿದ ಮುಗಿಲ ತಡೆಯಬಲ್ಲೆ,
ಮುಳಿದ ತಂದೆಯ ತಡೆಯೆನು.
ಇತ್ತ ಕರೆಮೊರೆ ಹಿಂದಕಾಯಿತು;
ಅತ್ತ ತೆರೆಮೊರೆ ಸುತ್ತಿಕೊಂಡಿತು;
ಆಳ ಕೈಯಲಿ ತಾಳಬಹುದೇ
ಏಳುಬೀಳಿನ ಕಡಲದು!
ಅಲೆಗಳಬ್ಬರದಲ್ಲಿ ಮೀಟಿ
ಮುಳುಗುತಿಹರು, ಏಳುತಿಹರು-
ಕರೆಗೆ ಬಂದ ಕಾರಿಹೆಗ್ಗಡೆ,
ಕರಗಿ ಮುಳಿಸು, ಅತ್ತನು!
ತೊಂಡುತೆರೆಗಳ ಮುಸುಕಿನಲ್ಲಿ,
ಕಂಡು ಮಗಳ, ಕರಗಿಹೋದ-
ಒಂದು ಕೈ ನೀಡಿದಳು ನೆರವಿಗೆ,
ಒಂದು ತಬ್ಬಿತು ನಲ್ಲನ!
ಮರಳು, ಮರಳು, ಮಗಳೆ ಎಂದ,
ಮೊರೆವ ಕಾಯಲ ಗಂಟಲಿಂದ;
ಮರೆತೆ, ಒಪ್ಪಿದೆ ನಿನ್ನ ನಲ್ಲನ,
ಮರಳು ಕಂದಾ ಎಂದನು .
ಮರುಳಬಹುದೇ? ಹೋಗಬಹುದೆ?
ಕರೆಯ ತೆರೆಯಪ್ಪಳಿಸಿ ಹೋಯ್ದು
ಹೊರಳಿಹೋದುವು ಮಗಳ ಮೇಲೆ,
ಕೊರಗಿನಲಿ ಅವನುಳಿದನು .
*****
CAMPBELL (1777-1844) : Lord Ullin’s Daughter
Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...