Home / ಕವನ / ಅನುವಾದ / ಹಳೆಯ ಪಳಕೆಯ ಮುಖಗಳು

ಹಳೆಯ ಪಳಕೆಯ ಮುಖಗಳು

ಕಂದ ಬಿದ್ದೆಯ ಎಂದು ಮುದ್ದಿಸಿ ನನಗೆ ಮರುಗುವರಿದ್ದರು;
ಅಂದಿನೋದಿನ ಸುಖದ ದಿನದಲಿ ಜತೆಗೆ ಕುಣಿಯುವರಿದ್ದರು.
ಎಲ್ಲ, ಎಲ್ಲಾ ಮಾಯವಾದುವು ಹಳೆಯ ಪಳಕೆಯ ಮುಖಗಳು.

ಪರಿಸೆನೋಟವೊ, ಹೊಳೆಯಲೂಟವೊ, ಬಯಲಿನಾಟವೊ, ಪಾಟವೋ,
ಇರುಳು ಮುಸುಕಿಯು ಮನೆಯ ನೆನೆಯದ ನಮ್ಮ ಲಗ್ಗೆಯ ಕೂಟವೋ;
ಎಲ್ಲ, ಎಲ್ಲಾ ಮಾಯವಾದುವು ಹಳೆಯ ಪಳಕೆಯ ಮುಖಗಳು.

ಹರಸಿ ಪಡೆದೆನು ಹೆಣ್ಣನೊಂದನು- ಹೇಳಲರಿಯೆನು ಹಿತುವನು;
ಉರಿದುಹೋದಳು, ಬೂದಿಯಾದಳು, ಹಿಡಿವುದಿನ್ನೆಲ್ಲವಳನು;
ಎಲ್ಲ, ಎಲ್ಲಾ ಮಾಯವಾದುವು ಹಳೆಯ ಪಳಕೆಯ ಮುಖಗಳು.

ಕೆಳೆಯನಿರುವನು – ಯಾರಿಗಿರುವರೊ ಆತನಕ್ಕರೆಯಾಪ್ತರು?
ಕಳೆದುಕೊಂಡೆನು ; ಮೇಲೆ ನಗುವುದೆ, ಒಳಗೆ ಕಲ್ಲೆದೆಯಾದನು.
ಎಲ್ಲ ಹೋದುವು, ಎಲ್ಲ ಹೋದುವು ಹಳೆಯ ಪಳಕೆಯ ಮುಖಗಳು.

ಗಾಳಿಕೂಟವೆ ನಾನು : ಸುಳಿವೆನು ಹಸುಳೆ ಸುಳಿದೆಡೆಯೆಡೆಯೊಳು,
ಹಾಳುಬಾಳಿನ ಮರಳುಕಾಡಿನೊಳರಸಿ ಹಿಂದಿನ ನಿಧಿಯನು!
ಎಂದೊ ಹೋದುವು, ಎಂದೊ ಹೋದುವು ಹಳೆಯ ಪಳಕೆಯ ಮುಖಗಳು.

ನನ್ನ ಕೆಳೆಯನೆ, ಒಂದೆ ಕರುಳಿನ ಮಮತೆ ಮೀರಿದ ಕೆಳೆಯನೆ?
ನನ್ನ ತಂದೆಯ ಮನೆಯಲೇತಕೆ ಹುಟ್ಟಿ ಬೆಳೆಯೆಯೊ, ಕೆಳೆಯನೆ?
ಹೋಗವಲ್ಲವೆ ಆಗ, ಎಲ್ಲಾ ಹಳೆಯ ಪಳಕೆಯ ಮುಖಗಳು!

ಕೆಲವರಳಿದರು, ಕೆಲವರುಳಿದರು, ಕೆಲವರೊಗ್ಗದೆ ಮುಳಿದರು.
ಕೆಲವರೆನ್ನನು ದೂರಿ ಹಳಿದರು, ಹೊರಗೆ ಹಾಕಿದರೆಲ್ಲರೂ!
ಎಲ್ಲ, ಎಲ್ಲಾ ಮಾಯವಾದುವು ಹಳೆಯ ಪಳಕೆಯ ಮುಖಗಳು.
*****
LAMB : (1775 – 1834) : Old Familiar Faces

Tagged:

Leave a Reply

Your email address will not be published. Required fields are marked *

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...