Home / ಕವನ / ಕವಿತೆ / ಕೋಗಿಲೆ

ಕೋಗಿಲೆ

೧
ಕೋಗಿಲೆ ಕುರೂಪಿಯೆನೆ, ರಾಗದಲಿ ಹಾಡುತಿಹ
ಮಧುರ ಸಂಗೀತವಶ್ರಾವ್ಯವಹುದೇನು?
ಭಾವ-ರಸ ಬೆರೆದಿರುವ ಕೋಗಿಲೆಯ ಸವಿ ಸರವ
ಕೇಳೆನೆಂದಾರಾದಕೊರೆಯುತಿಹರೇನು?

೨
ಮಾಮರದ ಕೊಂಬೆಯಲಿ ಮಾಂದಳಿರ ಮೆಲ್ಲುತ್ತ,
ನವ ವಸಂತನ ಗಾನ ಗೈವ ಕೋಗಿಲೆಯು,
ಆಗೊಮ್ಮೆ ಈಗೊಮ್ಮೆ ‘ಕುಹೂ-ಕುಹೂ’ ಎಂದು
ಮಧುರ-ಮಂಜುಲ ಕಂಠದಿ೦ದುಲಿಯುತಿಹುದು.

೩
ಒ೦ದೆ ಹಾಡಿನೊಳೆನಿತೊ ಭಾವವನು ಬಿಂಬಿಸುತ,
ಮನವ ರಂಜಿಸುತಿರುವ ಪಿಕವು ವರಕವಿಯೊ?
ಅಲ್ಲದಿರೆ ಶಾರದೆಯು ವರದ ಹಸ್ತವನಿದರ
ಮಸ್ತಕದ ಮೇಲಿಟ್ಟು ಹರಸಿರುವಳೇನೊ?

೪
ಒಂದೊಮ್ಮೆ ಪಿಕದುಲಿಯು ಮಾನವರ ಕಿವಿದೆರೆಗೆ
ಕೇಳಿದರೆ ಹೃದೆಯಾಬ್ಧಿ ವೀಚಿಯಾಡುವುದು.
ಮಧುಮಾಸದಲಿ ಮೆರೆವ ಕೋಗಿಲೆಯು ಸಾಮಾನ್ಯ
ಪಕ್ಷಿಯಲ್ಲದು ಮಧುರ ಗಾನ ದೇವತೆಯು!
*****
೧೯೪೩

Tagged:

Leave a Reply

Your email address will not be published. Required fields are marked *

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...