Home / ಕವನ / ಕವಿತೆ / ಗಾಯಕ

ಗಾಯಕ

ಉದಯಭಾನಿನ ನಡುವೆ,
ಸುಮದನಾಡಿನ ಕಡೆಗೆ ;
ಹೊರಳಿದನು ಒಲುವಿನಲಿ,
ಗಾಯಕನು ಕೊನೆಗೆ

ವೀಣೆಮಿಡಿ ಹಿಡಿದು,
ಮನದಿರಾಗನ ನೆನೆದು;
ತೂರಿದನು ಸಾಗಿದನು
ನಲ್ಮೆಯಲಿ ಮೆರೆದು.

ಮಾರುತನ ಮಿಳಿತದಲಿ,
ಸುಮದ ಸಾನ್ನಿಧ್ಯದಲಿ;
ಒಮ್ಮೆಯಲೆ ಬೆರೆಸಿದನು
ಗಾಯಕನು ಬನದಿ.

ಮುಗುಳು ಅರಳಿರಲು,
ಮಧುರ ತರುತಿರಲು;
ನೋಡಿದನು ಗಮ್ಯದಲಿ
ಪ್ರಜ್ವಲಿಪ ಚಲುವ.

ವದನದಲಿ ಮೆಲುನಗೆಯು,
ಮನದಿ ಸಂತಸತರಲು;
ಮೀಟಿದನು ವೀಣೆಯನು
ಗಾಯಕನು ನುಡಿಯೆ.

ವನದಿ ಸುಮವಿರಲು,
ಮಧುರ ತರುತಿರಲು;
ಹಾಡಿದನು ತನ್ಮಯದಿ
ರಾಗವನು ಹಿಡಿದು.

ಕೂಡಿ ಭುವನದಲಿ,
ಉದ್ಭವದ ಸೊಬಗಿನಲಿ;
ಪಲ್ಲವದ ಮೇಳದಲಿ
ಕಂಡನಾಬನದಿ.

ಇಂಚರದ ಧ್ವನಿ ಹಾಗೂ
ಘನತೆ ಹೆಮ್ಮೆಯಸೋಗು;
ಕೂಡುತಿತು ಮೇದಿನಿಯ
ನಡುವಯವ ಹಿಡಿದು.
*****

Tagged:

Leave a Reply

Your email address will not be published. Required fields are marked *

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...