Home / ಕವನ / ಕವಿತೆ / ಬೀಳ್ದ ಕುಸುಮ

ಬೀಳ್ದ ಕುಸುಮ

ಆವದೇವನ ಬನವೋ! ದೇವದೇವನ
ಬನವೋ! ದೇವನಾಡಿದ ಬನವೋ! ಮತ್ತೆ
ದೇವಾನುದೇವತೆಗಳಲ್ಲ ಕೂಡಿದ
ಬನವೋ! ಇದು ಇಂದ್ರವನ! ಸಗ್ಗವನ!
ಆವುದಾದರು ಇರಲಿ; ನಾನಿರ್ಪ
ಒನವಿದೇಂ ದಿವ್ಯ ಬನವೋ!
ಪೂರ್ವಜನ್ಮದ ಫಲವೋ! ಪುಣ್ಯ
ಪೆಚ್ಚಿದ ಫಲವೋ! ದೇವನೊಲುಮೆಯ
ಫಲವೋ! ಏನಿರ್ದೊಡೇನಿಂದು
ಸುಪ್ರಭಾತದ ಸಮಯ! ಏವೇಳ್ವೆ
ಬನಸಿರಿಯನೆಡೆವಿಡದಲೀಕ್ಷಿಸುವ
ಕಂಗಳಿವು ನಿಜ ಧನ್ಯ! ಧನ್ಯ!!

ಬನದಸುತ್ತಲು ಮತ್ತೆ ಬೆಟ್ಟಗಳು!
ಬೆಟ್ಟದೊಳು ಅಲ್ನೋಡು ದಿವ್ಯಬೆಟ್ಟ!
ಹಿಂಜಿದರಳೆಯಬೆಟ್ಟ! ಹಿಮದಬೆಟ್ಟ!
ಮುಗಿಲರಸಿಯನ್ನೊಮ್ಮೆ ಮುದ್ದಿಡುವಬೆಟ್ಟ!
ಆರವರು? ಬೆಟ್ಟವಂ ಅಡರಿಹರು?
ಅಡರಿ ಇಳಿಯುತಲಿಹರು ಇತ್ತಕಡೆ
ಮೇಲುನಡಿಗೆಯಿಂ ಬರುತಿಹರು. ಓ, ನನ್ನ
ಗಂಗೆ, ಯಮುನೆಯರು! ಸಂಚರಿಸಿ ಅಲ್ಲಲ್ಲಿ

ಏವೇಳ್ವರೇನೊ, ಎಂತೊ, ಮನೆಗಂತು
ಬರಲಿ. ಅಯ್ಯೊ, ಏಂ ಪ್ರಮಾದವನರಿಯೆ
ಸಾಗರದಿ ಧುಮುಕಿದರು ಎಂದೇಳ್ವರೋ!
ಇದುನೋಡು ಇತ್ತಲೂ ಸಮದೃಶ್ಯ!
ಭೀಮೆ, ಕೃಷ್ಣೆ, ಕಾವೇರಿಯರು ಅತ್ತಿಂದ
ಬಂದೊಡನೆ ಸಾಗರದಿ ಧುಮುಕಿದರು ಸುಳಿವಿಲ್ಲ.
ವಿಧವೆಯರೆ ಅವರೆಲ್ಲರೂ? ಅಲ್ಲಲ್ಲ!
ಅವರ ನಲ್ಲರ ನೆನಹು ನನಗಿರ್ಪುದೈ!
ಏಂ ಕಾರಣವೊ ನಾನರಿಯೆನಲ್ಲಾ!
ಅಯ್ಯೊ, ನಾನೆಂಥ ಜಾಣೆ? ಎನಗಿರ್ಪ
ಉದಯದಾನಂದದಲಿ ಕಾಳತಾಪವ ಮತ್ತೆ
ಬೆರೆಸಲೆತ್ನಿಸುತಿರ್ಪೆ, ಹುಚ್ಚು! ಹುಚ್ಚು!
ಸುಪ್ರಭಾತದಲೇಳ್ದು, ಸೃಷ್ಟಿಸೊಬಗಂ ಕಾಣ್ದು
ಅವರೆಲ್ಲರೂ ಜಲಕ್ರೀಡೆಯಾಡುತಿರ್ಪರ್‌.

ಇದು ನೋಡು, ಇಲ್ಲಿರ್ಪ ಸೋಜಿಗದ ಕಾರಂಜಿ!
ಪೂರ್ವಜರ ಕೌಶಲ್ಯ ಹೊರಹೊಮ್ಮುತಿದೆ! ಮತ್ತೆ
ಪುಟಿಯುತಿದೆ! ಎಂಪೋಲ್ವರಾರೆಂದೇನೊ
ಅಂದಂದು, ಜಿಗಿಜಿಗಿದು, ಪುಟಿಯುತಿದೆ!
ಇಂದೇಕೊ ಕಾರಂಜಿ ಜಲದಿ ತುಂಬಿಲ್ಲವೇನೋ!
ಜಲವಿರ್ದರೂ ಪುಟಿವ ಶಕ್ತಿಯಿಲ್ಲೇನೋ!
ಶಕುತಿಯಿರುತಿರ್ದರೂ ಮಾರ್ಗವಿಲ್ಲೇನೋ!
ಇರಲಿ, ಇದುನೋಡು ಕುಸುಮಗಳ ಉದ್ಯಾನ!
ಅಲ್ಲಿ ಸೇವಂತಿಗೆಯು! ಇಲ್ಲಿ ಸಂಪಿಗೆಯು!
ಎಲ್ಲೆಲ್ಲು ಮಲ್ಲಿಗೆ ಪಾರಿಜಾತಗಳು!
ಎಲ್ಲವೂ ಎಲ್ಲರಿಗೆ ಸೌಗಂಧ ಪೂಸುತಿವೆ!
ಮಂದಮಾರುತಗಂತು ಕೇಳ್ವರಾರೊಬ್ಬರಿಲ್ಲ!
ಕುಸುಮ ಬೇಡದ ಕುವರಿಯಿರುತಿರ್ಪಳೇ?
ಮತ್ತೆ ದೇವನಿರ್ಪನೆ ಪೇಳಿ ಪೇಳಿ!
ಕೆಲರು ತಮ್ಮಯ ನಲುಮೆಗೋಸುಗ ಕುಸುಮ-
ಗಳನಾಯುತಿಹರಲ್ಲಿ! ಕೆಲರು ದೇವನಪೂಜೆ-
ಗೆಂದಾಯುತಿಹರದದೊ! ಕೆಲರು ತಮ್ಮಯ
ನಲ್ಲೆಯರಿಗಾಗಿ! ಏಂ ಕುಸುಮಗಳೋ! ಎಷ್ಟು
ಜನಕೀವವೋ! ಮೊದಲೆಷ್ಟು ಅರಳಿದವೋ!
ಮುಂದೆಷ್ಟು ಅರಳುವವೊ! ಇಂದೆಷ್ಟುನಾನರಿಯೆ!

ಏನಿದೀ ಅನ್ಯಾಯ! ಘೋರತರ ಅನ್ಯಾಯ!!
ಈ ಬೀಳ್ದ ಕುಸುಮವಂ ಆಯ್ವರಾರೊಬ್ಬರಿಲ್ಲ.
ನನ್ನ ನಲ್ಲನೆ ಅಂದು ಎಂದೋ ಒಮ್ಮೆ
ಕೆಡಹಿದಂತೆಯೊ ಏನೊ ಭಾಸವಾಗುತಿದೆ;
ಅಥವಾ ಅವರಪ್ಪ ತಾತ ಮುತ್ತಾತ
ಕೆಡಹಿರಬಹುದು. ಆದೊಡೇನದನೊಮ್ಮೆ
ಕಣ್ದೆರೆದು ನೋಡದಿರ್ಪುದೆ ನಲ್ಲ?
ಅದದೊ ನನ್ನಯ ನಲ್ಲ ನಿದ್ರೆಯಿಂದೆಚ್ಚತ್ತು
ಈಗೀಗ ಕಣ್ಣೊರಿಸಿಕೊಳ್ಳುತ್ತ ಮೆಲ್ಲನೆ
ಆಗಮಿಸುತಿರುವಂತೆ ತೋರುತಿದೆ!

ಕಲುದೇವನ ಕಂಠ ಪೂಮಾಲೆಯಿಂ
ಶೋಭಸುತಿರ್ತಾದೋಡೇಂ ಬೀಳ ಕುಸುಮಕೆ
ಆ ಮಾಲೆಯೋಳ್‌ ತಾಣವಿರಲಿಲ್ಲ. ಮತ್ತೊಮ್ಮೆ
ಕೆರೆಗೆ ನಾನೈ ತಂದೆ. ಕುವರಿಯರ ಮುಡಿಗಳಲಿ
ಮಲ್ಲಿಗೆಗಳೆಷ್ಟಿರ್ದೊಡೇಂ ಬೀಳ್ದಕುಸುಮ
ಆರೊಬ್ಬರಲ್ಲಿಯು ಕಾಣೆ! ಎಲ್ಲಿಯೂ ಕಾಣೆ ಕಾಣೆ!

ನಾನಾರೆ ಮುಡಿಯಲಾ? ನನ್ನ ನಲ್ಲನ ಭಯವು!
ಕೇಳದಲೆ ಮುಡಿದಳೆಂದೆಲ್ಲಿ ಮುನಿಯುವನೋ!
ಬಿಟ್ಟುಬಿಡಲಾ? ಮತ್ತೆ ಮರುಕ ಬಪ್ಪುದು!
ಬರಲಿ ಎನ್ನೊಡೆಯ ಕೇಳಿಯೆ ಬಿಡುವೆ!
`ಬತ್ತಿಹುದು ಬಾಡಿಹುದು ಬಿಸುಡೆ’ನ್ನುವನು!
`ಅದಕೆಲ್ಲ ಕಾರಣರು ನೀವೆಂ’ದು ನಾನುಡಿವೆ.

ಸ್ವಾಗತವು ಸ್ವಾಗತವು ಓ, ನನ್ನನಲ್ಲ!
ಬೀಳ್ದ ಕುಸುಮವನಿಲ್ಲಿ ಬಿಟ್ಟು ಬಿಡುವುದೇ?
ಆವಕರ್ಮದ ಫಲವೋ! ಏಂ ನಿಮ್ಮ ಛಲವೋ!
ಬೀಳ್ದ ಕುಸುಮವೆ ಇರಲಿ; ಏಳ್ದುದಿರಲಿ;
ಏನಾದೊಡೇಂ ಕುಸುಮ! ಕುಸುಮ!
ನನ್ನೊಡೆಯ, ನನ್ಮೊಡೆಯ, ಓ ನನ್ನ ಒಡೆಯ
ಮೆಯ್ಯೊಳಿಹ ಬಿಸಿರಕ್ತ ತಣ್ಣಗಾಗುವ ಮುನ್ನ,

ಶಕುತಿಯದು ಕುಗ್ಗಿ ಕುಂದದ ಮುನ್ಶ
ಕಪ್ಪಿನೀ ಕೇಶಗಳು ಬಿಳಿಯವಾಗುವ ಮುನ್ನ
ನನ್ನೊಡೆಯ, ನನ್ನೊಡೆಯ, ಓ ನನ್ನ ಒಡೆಯ
ಬೀಳ್ದ ಕುಸುಮವನೆನ್ನ ಮುಡಿಯೊಳಿಡು!
ಬಿಟ್ಟ ಹೊಲೆಯರನೊಮ್ಮೆ ಮುಟ್ಟಿ ಬಿಡು!
*****

Tagged:

Leave a Reply

Your email address will not be published. Required fields are marked *

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...