Home / ಕವನ / ಕವಿತೆ / ದೀಪಸ್ತಂಭ

ದೀಪಸ್ತಂಭ

ಸುತ್ತೆಲ್ಲ ನೀರೆ ನೀರಾದ ಕಡಲಿನ ಹರವು
ಎತ್ತಲೂ ಏರೇರಿ ಬರುವ ತೆರೆ ಸಾವಿರವು
ಇದು ಏನು ಯಾಕೆಂದು ತಿಳಿವ ಬಗೆನಾವೆಗಳು
ಮದದಿ ಸುಳಿದಾಗಿಹವು ಬರಿ ಮೂಡುಮುಳುಗುಗಳು.
ಎಂದಿಗೂ ಇದ್ದಂತೆ ಇಹುದು ಈ ಮುನ್ನೀರು
ಇಂದಿಗೂ ಇದರಾಳವರಿತವರು ಅದು ಯಾರು ?
ಅರಿಯಹೋದರೆ ಹೆಮ್ಮೆ ತಳಕಾಣುವುದು ಒಮ್ಮೆ
ಇರುವುದಿದ್ದಂತಿರವು ಅಜೇಽಯವಿದು ನೂರ‍್ಮೆ
ತತ್ವವೇನೇ ಇರಲಿ, ಸತ್ವವೇ ಹಿರಿಯಿರವು
ಸತ್ವದಲ್ಲಿ ತನ್ನ ಕೋಟೆಯ ಕಟ್ಟೆ ಅದೆ ಅರಿವು
ಮುನ್ನೀರ ತೆರೆಹೊಯ್ಲು ಮುತ್ತಿ ಮುಸುಕಿದರೇನು ?
ಕಣ್ಣೀರ ಹೊಳೆಬಂದು ಕೂಡಿ ಕಲಕಿದರೇನು ?
ಅಲುಗದರೆಬಂಡೆಯೊಂದರ ಮೇಲೆ ಕಾಲೂರಿ
ಅಲೆಯದರಿವಿನ ದೀಪಸ್ತಂಭವಾಗಿಹುದೆ ಸಿರಿ.
*****

Tagged:

Leave a Reply

Your email address will not be published. Required fields are marked *

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...