ಒಳ್ಳೇದಲ್ಲ ನಿನ್ನ ಸಲಗೀ
ನಾ ಒಲ್ಲೆನು ಹೋಗ ||ಪ||
ತನುತ್ರಯ ಗುಣವೆಂಬು ಮನಸಿನಾಶೆದೊಳಿಟ್ಟು
ದಿನಗಳ ನೆನಸಿ ನಿಮಗ ಏನೇನು ಬೇಕು ||೧||
ಹರಿ ಸುರರು ಪರಿಭವ ಕಟ್ಟಿಸಿದ
ಅರಿಯದವರ್ಯಾರು ನಿಮಗ ಬರದಿರು ಮೈಮಾಗ ||೨||
ನಡಿ ನಡಿ ಶಿಶುನಾಳದ ಒಡಿಯ ಕಂಡೀಕ್ಷಣ
ನಡಿ ಪೀಡಸದ್ಹಾಂಗ ಎಡಬಲ ಬರದ್ಹಾಂಗ ||೩||
****