ದಣಿದ ಜೀವಕೆ ಮತ್ತೆ ಕನಸುನುಣಿಸಿ

ದಣಿದ ಜೀವಕೆ ಮತ್ತೆ ಕನಸನುಣಿಸಿ
ಕುಣಿಸಿರುವ ನೀರೆ ನೀನು ಯಾರೆ?
ಯಾರೆ ಚದುರೆ, ನೀನು ಯಾರೆ ಚದುರೆ?
ಬಗೆಗಣ್ಣ ತೆರೆಸಿದ ಭಾವಮದಿರೆ

ಉರಿವ ಬಿಸಿಲಿಗೆ ತಂಪು ಗಾಳಿ ಸುಳಿಸಿ
ಮಣ್ಣಿನಲಿ ಮಳೆಬಿಲ್ಲ ಬಣ್ಣ ಕಲೆಸಿ,
ಮಾತಿನಾಳಕೆ ಸಿಗದ ಉರಿಯ ಚಿಗುರ
ಬೊಗಸೆಗಣ್ಣಿನ ಪಾತಿಯಲ್ಲಿ ಬೆಳೆಸಿ,
ಏಕೆ ಕಾಡುವೆ ನೀನು ಯಾರೆ ಚದುರೆ
ನಿನ್ನ ಚೆಲುವಿಗೆ ಎಷ್ಟು ಸ್ವರ್ಗ ಇದಿರೆ?

ದಾರಿ ಹುಡುಕಿದೆ ಹೇಗೆ ಚೆಲುವೆ ಈ ಮನೆಗೆ
ನೂರು ಕಳವಳ ಕಾಲು ಕಚ್ಚುವೆಡೆಗೆ?
ಕಾರಿರುಳು ಕವಿದಿರಲು ಬಂದೆ ಹೇಗೆ
ಮೈತುಂಬ ಪ್ರೀತಿಯನು ತಂದೆ ಹೇಗೆ?
*****

ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೇರುಗಳು
Next post ನಗೆ ಡಂಗುರ – ೮೪

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…