ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ

ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ ಎನಗೊಂದು
ಮಣಿಮಾಲಿಕೆ ಕೊಟ್ಟನೋ ಸದ್ಗುರುನಾಥ

ಪ್ರಣಮ ಪಂಚಾಕ್ಷರಿಯ ಎಣಿಸಿ ಜಪಮಾಡೆಂದು
ಹನ್ನೊಂದುಮಣಿ ಮೇಲೆ ಇನ್ನೊಂದು ಸಣ್ಣರುದ್ರಾಕ್ಷಿ                    ||ಅ. ಪ||

ಅದರೊಳುನ್ನತಾಮೃತದ ಶಿಲೆಮಾನ ರತ್ನದ ಹರಳಿನೊಳು
ಚಿನ್ನದ ಎಳಿಯ ಪೋಣಿಸಿ ಎಣಿಸಿ ಜಪಮಾಡೆಂದು                     ||೧||

ಕಸುಗ್ರಾಮದ ಕಡಕೊಳ್ಳ ಕಡಗಿಟ್ಟು
ಹೊಸಗ್ರಾಮ ಸ್ಥಳಕಿಳಿದು
ಬಸವನಾಮಾಮೃತದ ರುಚಿ ಕಂಠಮಾಲೆಯನು ಕೊಟ್ಟಾತನೋ ತಾನು       ||೨||

ಕರದಿ ಕೈದಂಡ ಕೋಲು ಪಾರಮಾಡಿದ ವಿರಚಿಸಲು
ವರವೀರಯೋಗಿ ಧರೆಗೆ ಮೇಲೆ ಶಿಶುನಾಳಧೀಶ
ತರಲಘಟ್ಟದ ಪೀರ ಫಕೀರನಾಗೆನುತ ಮಣಿಮಾಲಿಕವ ಕೊಟ್ಟನೋ     ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುರುನಾತಹನಂತಃಕರಣವಾಯಿತು
Next post ಸದ್ಗುರುವಿನ ವರವು ನಮಗೆ ಇರಲಿ

ಸಣ್ಣ ಕತೆ

  • ತಾಯಿ-ಬಂಜೆ

    "ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…